Advertisement

ಸಾಂಸ್ಕೃತಿಕ ಉತ್ಸವಕ್ಕೆ ಅನುದಾನ ನೀಡಲು ಮನವಿ

11:51 AM Mar 01, 2022 | Team Udayavani |

ಬೀದರ: ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದಿಂದ ನಡೆಸಲು ಉದ್ದೇಶಿಸಿರುವ ಸಾಂಸ್ಕೃತಿಕ ಉತ್ಸವಕ್ಕೆ ಅಗತ್ಯ ಅನುದಾನ ನೀಡಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಸೋಮಶೇಖರ ಭರವಸೆ ನೀಡಿದರು.

Advertisement

ನಗರಕ್ಕೆ ಭೇಟಿ ನೀಡಿದ್ದ ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಮನವಿ ಸ್ಪಂದಿಸಿರುವ ಅಧ್ಯಕ್ಷರು, ಕ.ಕ ಭಾಗದಲ್ಲಿ ಏಪ್ರಿಲ್‌ -ಮೇ ತಿಂಗಳಲ್ಲಿ ಸಮಾವೇಶ ನಡೆಸಲು ಸರ್ಕಾರದಿಂದ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಸೋನಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಅನೇಕ ಸಂಘ-ಸಂಸ್ಥೆಗಳು ನಾಯಿ ಕೊಡೆಯಂತೆ ಹುಟ್ಟುಕೊಂಡಿವೆ. ಆದರೆ, ಅರ್ಹ ಸಂಘ-ಸಂಸ್ಥೆಗಳಿಗೆ ಗಡಿ ಪ್ರದೇಶದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಕನಿಷ್ಠ 50 ಸಾವಿರದಿಂದ ಗರಿಷ್ಠ 5 ಲಕ್ಷ ರೂ. ವರೆಗೆ ಅನುದಾನ ನೀಡಲು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಬೀದರನಲ್ಲಿ ನನೆಗುದಿಗೆ ಬಿದ್ದಿರುವ ಕನ್ನಡ ಭವನ ಕಟ್ಟಡ ಕಾಮಗಾರಿಗೆ ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಹಸಿರು ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ಅಧ್ಯಕ್ಷ ರವೀಂದ್ರ ಕಾಂಬಳೆ, ಛತ್ರಪತಿ ಶಿವಾಜಿ ಮಹಾರಾಜ ವಿಕಾಸ ಮಹಾ ಮಂಡಳದ ಪ್ರದೀಪ ಬಿರಾದಾರ, ಅಂಬಿಗರ ಚೌಡಯ್ಯ ಯುವ ಸೇನೆ ಅಧ್ಯಕ್ಷ ಸುನೀಲ ಭಾವಿಕಟ್ಟಿ ಮತ್ತು ಹೆಂಡದ ಮಾರಯ್ಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ಯಾದವರಾವ್‌ ಘೋಡ್ಶೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next