Advertisement

ಉಪನ್ಯಾಸಕರ ನೇಮಕಕ್ಕೆ ಆಗ್ರಹ

05:51 PM Jan 02, 2022 | Team Udayavani |

ಮುದಗಲ್ಲ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸುಮಾರು ನಾಲ್ಕು ನೂರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಉಪನ್ಯಾಸಕರ ಕೊರತೆಯಿಂದ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ. ಕಾರಣ ಉನ್ಯಾಸಕರ ನೇಮಕ ಮಾಡುವಂತೆ ಸರಕಾರದ ಮೇಲೆ ಒತ್ತಡ ತರಬೇಕೆಂದು ಒತ್ತಾಯಿಸಿ ಶಾಸಕ ಡಿ.ಎಸ್‌. ಹೂಲಗೇರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

Advertisement

ಉಪನ್ಯಾಸಕರ ಕೊರತೆ ಬಗ್ಗೆ ಪ್ರಾಚಾರ್ಯರ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ. ಅತಿಥಿ ಉಪನ್ಯಾಸಕರ ನೇಮಕವು ಸರಿಯಾಗಿ ಆಗಿಲ್ಲ. ನೇಮಕವಾದರು. ಸೇವಾ ಭದ್ರತೆಗೋಷ್ಕರ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ಪಾಠ ಕೆಳದೆ ಮನೆಗೆ ಮರಳುವಂತಾಗಿದೆ ಎಂದು ವಿದ್ಯಾರ್ಥಿಗಳು ಶಾಸಕರ ಮುಂದೆ ದೂರಿದರು.

ಈ ಸಂದರ್ಭದಲ್ಲಿ ಚನ್ನಬಸವ ಮಡಿವಾಳರ, ಬಸವರಾಜ, ಮಹೇಶ, ಕನಕಪ್ಪ, ವೀರೇಶ ಸೇರಿದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next