Advertisement

ವೈದ್ಯರ ಮೇಲೆ ಹಲ್ಲೆ ನಡೆಸಿದವರ ಬಂಧನಕ್ಕೆ ಆಗ್ರಹ

11:03 AM Nov 08, 2019 | Suhan S |

ಹುಬ್ಬಳ್ಳಿ: ವೈದ್ಯರ ಮೇಲೆ ನಡೆಸಿದವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಇಂಡಿಯನ್‌ ಮೆಡಿಕಲ್‌ ಅಸೋಸಿಯೇಶನ್‌ ಸ್ಥಳೀಯ ಘಟಕದ ಆಶ್ರಯದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Advertisement

ಡಾ| ಜಿ.ಬಿ.ಸತ್ತೂರ ಮಾತನಾಡಿ, ಇಂದು ಸಮಾಜದಲ್ಲಿ ಜೀವ ಉಳಿಸುವ ವೈದ್ಯರ ಮೇಲೆ ಹಲ್ಲೆ ಮಾಡುತ್ತಿರುವುದಾದರೂ ಏಕೆ ಎನ್ನುವ ಪ್ರಶ್ನೆ ನಮ್ಮೆಲ್ಲರನ್ನು ಕಾಡುತ್ತಿದೆ. ಇಂತಹ ಘಟನೆಗಳಿಂದಾಗಿ ವೈದ್ಯರು ಚಿಕಿತ್ಸೆ ನೀಡಲು ಸಹ ಹಿಂಜರಿಯುತ್ತಿದ್ದು, ನಮಗೇಕೆ ಉಸಾಬರಿ ಎಂದು ಹಿಂದೆ ಸರಿಯುತ್ತಿದ್ದಾರೆ ಎಂದರು.

ನೇತ್ರ ತಜ್ಞ ಡಾ| ಶ್ರೀನಿವಾಸ ಜೋಶಿ ಮಾತನಾಡಿ, ಮಿಂಟೊ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣೆ ಮಾಡಿರುವ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಅವಳದಲ್ಲದ ತಪ್ಪಿಗೆ ಅವಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಹೇಳಿದರು.

ಅಸೋಸಿಯೇಶನ್‌ ಅಧ್ಯಕ್ಷ ಡಾ| ಕ್ರಾಂತಿಕಿರಣ ಮಾತನಾಡಿ, ವೈದ್ಯರ ಮೇಲೆ ಹಲ್ಲೆ ಮಾಡಿರುವ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು. ಇಲ್ಲವಾದಲ್ಲಿ ನ. 8ರ ಬೆಳಗ್ಗೆ 6ರಿಂದ ನ. 9ರ ಬೆಳಗ್ಗೆ 6 ಗಂಟೆವರೆಗೆ ರಾಜ್ಯಾದ್ಯಂತ ಓಪಿಡಿ ವಿಭಾಗ ಬಂದ್‌ ಮಾಡಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಡಾ| ಸಚಿನ ರೇವಣಕರ, ಡಾ| ಮಂಜುನಾಥ ನೇಕಾರ, ಡಾ| ಕದಂ, ಡಾ| ಅಭಯ ಮಟಕರ, ಎಂ.ಸಿ. ಸಿಂಧೂರ, ಡಾ| ಜಿತೂರಿ, ಡಾ| ಸುರೇಶ ಕೊರ್ಲಹಳ್ಳಿ, ಡಾ| ಬಬ್ರುವಾಡ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next