Advertisement

ಬಸ್‌ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ

03:57 PM Feb 03, 2020 | Team Udayavani |

ಯಲಬುರ್ಗಾ: ಪಟ್ಟಣದಿಂದ ನರೇಗಲ್‌ಗೆ ಬಸ್‌ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಕಾನೂನು ಮತ್ತು ಸಾಮಾಜಿಕ ಕಲ್ಯಾಣಾಭಿವೃದ್ಧಿ ಸಂಘಟನೆ ಪದಾಧಿ ಕಾರಿಗಳು ಪಟ್ಟಣದ ಡಿಪೋದಲ್ಲಿ ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಅವರಿಗೆ ಮನವಿ ಸಲ್ಲಿಸಿದರು.

Advertisement

ಮಾನವ ಹಕ್ಕುಗಳ ಕಾನೂನು ಮತ್ತು ಸಾಮಾಜಿಕ ಕಲ್ಯಾಣಾಭಿವೃದ್ಧಿ ಸಂಘಟನೆ ಉತ್ತರ ಕರ್ನಾಟಕ ಅಧ್ಯಕ್ಷ ಭಾವಾಖಾನ್‌ ಮಾತನಾಡಿ. ಮುಧೋಳ, ಕರಮುಡಿ, ಬಂಡಿಹಾಳ, ತೊಂಡಿಹಾಳ ಸೇರಿದಂತೆ ಇನ್ನಿತರ ಗ್ರಾಮಗಳ ವಿದ್ಯಾರ್ಥಿಗಳು, ಪ್ರಯಾಣಿಕರು ನರೇಗಲ್‌ ಪಟ್ಟಣಕ್ಕೆ ಹೋಗಲು ಬಸ್‌ ಸಂಚಾರವಿಲ್ಲದೇ ಸಮಸ್ಯೆ ಅನುಭವಿಸುವಂತಾಗಿದೆ. ವಿದ್ಯಾಭ್ಯಾಸ ಸೇರಿದಂತೆ ವ್ಯಾಪಾರ ವಹಿವಾಟಿಗೆ ಜನತೆ ಯಲಬುರ್ಗಾ ಹಾಗೂ ನರೇಗಲ್‌ ಪಟ್ಟಣವನ್ನು ಅವಲಂಬಿಸಿದ್ದಾರೆ. ಆದರಿಂದ ಬೆಳಗ್ಗೆ ಮತ್ತು ಸಂಜೆ 5ಕ್ಕೆ ಎರಡು ವೇಳೆಯಲ್ಲಿ ಬಸ್‌ ಸೌಕರ್ಯ ಕಲ್ಪಿಸಿಕೊಡಬೇಕು. ಶೀಘ್ರದಲ್ಲಿ ಬಸ್‌ ಸೌಕರ್ಯ ಕಲ್ಪಿಸಲು ಮುಂದಾಗಬೇಕು. ಇಲ್ಲದೇ ಇದ್ದರೆ ಬಸ್‌ ಡಿಪೋ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಹಿಂದೆ ಹಲವಾರು ಭಾರಿ ಮನವಿ ಮಾಡಿದರೂ ಪ್ರಯೋಜನೆ ಇಲ್ಲದಂತಾಗಿದೆ. ಬಸ್‌ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು. ನರೇಗಲ್ಲ-ಯಲಬುರ್ಗಾ ಮಾರ್ಗ ಮಧ್ಯ ಬರುವ ಗ್ರಾಮಗಳ ಪೈಕಿ ನಿತ್ಯ ಸಾವಿರಾರು ಜನತೆ ಪ್ರಯಾಣ ಮಾಡುತ್ತಿದ್ದಾರೆ. ಆದ್ದರಿಂದ ಶೀಘ್ರದಲ್ಲಿ ಬಸ್‌ ಸೌಕರ್ಯ ಕಲ್ಪಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಮನವಿ ಪತ್ರ ಸ್ವೀಕರಿಸಿ ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಮಾತನಾಡಿ, ಶೀಘ್ರದಲ್ಲಿ ಪರಿಶೀಲನೆ ನಡೆಸಿ ಬಸ್‌ ಸೌಕರ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. ಕೊಪ್ಪಳ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಕಟ್ಟಿಮನಿ, ಜಿಲ್ಲಾ ಕಾರ್ಯದರ್ಶಿ ಪ್ರೇಮಾ ನಾಯಕನೂರು, ಪರಸಪ್ಪ ಪಂಚಮ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next