Advertisement

ಮನೆ ತೆರವು ಆದೇಶ ರದ್ದು ಕೋರಿ ಮನವಿ

09:55 AM Jul 21, 2019 | Team Udayavani |

ಹುಬ್ಬಳ್ಳಿ: ಸುಮಾರು 59 ವರ್ಷಗಳಿಂದ ವಾಸವಿದ್ದ ಮನೆಗಳ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದ್ದು, ತೆರವು ಆದೇಶ ರದ್ಧತಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಧಾರವಾಡ ತಾಲೂಕು ಕಲಕೇರಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.

Advertisement

ಶನಿವಾರ ಸಚಿವರ ನಿವಾಸಕ್ಕೆ ಆಗಮಿಸಿದ ಕಲಕೇರಿ ಗ್ರಾಪಂ ವ್ಯಾಪ್ತಿಯ ಕಲಕೇರಿ, ಲಾಳಗಟ್ಟಿ, ಉಡರ ನಾಗಲಾವಿ, ದೇವಗಿರಿ, ಹಣಸಿಕುಮಟಿ ಗ್ರಾಮಗಳ ಗ್ರಾಮಸ್ಥರು, 1960ರಿಂದಲೇ ಆ ಜಾಗದಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದೇವೆ. ಸರಕಾರದಿಂದ ವಿವಿಧ ಮೂಲಸೌಕರ್ಯಗಳನ್ನು ನೀಡಲಾಗಿದೆ. ಇದೀಗ ಧಾರವಾಡ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು 30 ದಿನದೊಳಗಾಗಿ ಮನೆಗಳನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಇದರಿಂದ ಸುಮಾರು 150ಕ್ಕೂ ಹೆಚ್ಚು ಕುಟುಂಬಗಳು ಆತಂಕಕ್ಕೀಡಾಗಿದ್ದು, ನಮ್ಮ ನೆರವಿಗೆ ಧಾವಿಸಿ ಅರಣ್ಯ ಇಲಾಖೆ ಆದೇಶ ರದ್ದತಿಗೆ ಕ್ರಮ ಕೈಗೊಳ್ಳಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next