Advertisement

ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ಮನವಿ

09:41 PM Feb 28, 2022 | Team Udayavani |

ಬೆಂಗಳೂರು: ಕೊರೊನಾ ಹಾಗೂ ಒಮಿಕ್ರಾನ್‌ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಆರ್‌ಟಿಇ ಅರ್ಜಿ ಸಲ್ಲಿಸಲು ಅವಕಾಶವಾಗಿಲ್ಲ.

Advertisement

ಹೀಗಾಗಿ, ಅರ್ಜಿ ಸಲ್ಲಿಕೆ ಅವಧಿಯನ್ನು 15 ದಿನಗಳ ಕಾಲ ವಿಸ್ತರಿಸುವಂತೆ ಆರ್‌ಟಿಇ ಸ್ಟೂಡೆಂಟ್ಸ್‌ ಆ್ಯಂಡ್‌ ಪೇರೆಂಟ್ಸ್‌ ಅಸೋಸಿಯೇಷನ್‌ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದೆ.

ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟು ಪಡೆಯಲು ಸಂಬಂಧ ಮಾ.3ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಕೊರೊನಾ ಕಾರಣದಿಂದ ಅರ್ಜಿ ಸಲ್ಲಿಸಲು ಅವಶ್ಯವಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗಿಲ್ಲ.

ಅರ್ಜಿ ಸಲ್ಲಿಕೆ ಅವಧಿಯನ್ನು 15 ದಿನ ಮುಂದೂಡಿದರೆ, ಅನುಕೂಲವಾಗುತ್ತದೆ ಎಂದು ಅಸೋಸಿಯೇಷನ್‌ ಪ್ರಧಾನ ಕಾರ್ಯದರ್ಶಿ ಬಿ.ಎಸ್‌. ಯೋಗಾನಂದ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next