Advertisement

ಸಿನೆಮಾ ಚಿತ್ರೀಕರಣಕ್ಕೆ ಮನವಿ: ಇಂದು ಸಿಎಂ ಸಭೆ

12:45 AM May 05, 2020 | Sriram |

ಬೆಂಗಳೂರು: ರಾಜ್ಯದಲ್ಲಿ ಚಲನಚಿತ್ರ, ಧಾರಾವಾಹಿ, ರಿಯಾಲಿಟಿ ಶೋ ಚಿತ್ರೀಕರಣಕ್ಕೆ ಅವಕಾಶ ಕೋರಿಕೆ ಸಂಬಂಧ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಯಲಿದೆ.

Advertisement

ಕರ್ನಾಟಕ ಟೆಲಿವಿಷನ್‌ ಅಸೋಸಿಯೇಷನ್‌ ಮನವಿ ಹಿನ್ನೆಲೆ ಸಭೆ ನಡೆಯಲಿದ್ದು ಚಿತ್ರೀಕರಣಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

ಸಿನೆಮಾ, ಕಿರುತೆರೆ, ರಿಯಾಲಿಟಿ ಶೋ ಚಿತ್ರೀಕರಣ ಸ್ಥಗಿತಗೊಂಡಿರುವುದರಿಂದ ಸಾವಿರಾರು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು ಷರತ್ತು ವಿಧಿಸಿ ಅನುಮತಿ ನೀಡುವಂತೆ ಕೋರಲಾಗಿತ್ತು. ಆದರೆ ಚಿತ್ರೀಕರಣಕ್ಕೆ ಅವಕಾಶ ಕೊಟ್ಟರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಬಹುದು ಎಂಬ ಕಾರಣಕ್ಕೆ ಸರಕಾರ ಒಪ್ಪಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next