ಹರಪನಹಳ್ಳಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಸರ್ಕಾರ ಕ್ರಮವಾಗಿ ಶೇ.15ರಿಂದ17ಕ್ಕೆ ಹಾಗೂ 3ರಿಂದ 7.5ಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೋರಾಟ ಸಮಿತಿ ತಾಲೂಕು ಘಟಕದ ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಮಾತನಾಡಿದ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರ ಕೂಡ ಸಮುದಾಯಗಳ ಮೀಸಲಾತಿ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಸರ್ಕಾರ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಂಧುಗಳು ಪಕ್ಷಭೇದ ಮರೆತು ಬೃಹತ್ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಕೆ. ಉಚ್ಚೆಂಗೆಪ್ಪ ಮಾತನಾಡಿ, ಈವರೆಗೂ ಸರ್ಕಾರ ಇದರ ಬಗ್ಗೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಕಿಡಿ ಕಾರಿದರು.
ಅರಸೀಕೆರೆಯ ವೈ.ಡಿ. ಅಣ್ಣಪ್ಪ, ಪ್ರಶಾಂತ್ ಪಾಟೀಲ್ ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಅಂಬಾಡಿ ನಾಗರಾಜ, ಭೋವಿ ಸಮಾಜದ ಅಧ್ಯಕ್ಷ ಎಂ.ಬಿ. ಅಂಜಿನಪ್ಪ, ಪುರಸಭೆ ಮಾಜಿ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿದರು.
ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಚಲುವಾದಿ ಸಮಾಜದ ಮುಖಂಡ ಗುಂಡಗತ್ತಿ ಕೋಟ್ರಪ್ಪ, ಮಡಿವಾಳ ಸಮಾಜದ ಅಧ್ಯಕ್ಷ ಯರಬಳ್ಳಿ ಉಮಾಪತಿ, ಮಾದಿಗ ಸಮಾಜದ ಮುಖಂಡ ಹಂಚಿನಮನಿ ಕೆಂಚಪ್ಪ,ನ್ಯಾಯವಾದಿ ಕಣಿವಿಹಳ್ಳಿ ಮಂಜುನಾಥ, ಕೊರಚರ ಸಮಾಜದ ಅಧ್ಯಕ್ಷ ಕೆ.ಅಶೋಕ, ಇದ್ಲಿ ರಾಮಪ್ಪ, ಕಂಚಿಕೇರಿ ಜಯಲಕ್ಷ್ಮೀ, ಮುಖಂಡರಾದ ನಿಟ್ಟೂರು ಸಣ್ಣ ಹಾಲಪ್ಪ, ಶಿವಾನಂದ, ಜಿ. ಕೆಂಚನ ಗೌಡ್ರು, ಆನಂದಪ್ಪ, ಬಾಣದ ಅಂಜಿನಪ್ಪ, ತೆಲಗಿ ಉಮಾಕಾಂತ, ನೀಲಗುಂದ ಬಿ. ವಾಗೀಶ, ಟಿ. ಮನೋಜ್ ಇದ್ದರು.