Advertisement

ಅವ್ಯವಹಾರ ತನಿಖೆಗೆ ಆಗ್ರಹ

01:12 PM Jan 14, 2020 | Team Udayavani |

ವಡಗೇರಾ: ತಾಲೂಕಿನ ಕುರಕುಂದ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ಹಾಗೂ ಅಭಿಯಂತರರು ಸೇರಿ ಸರ್ಕಾರದ ನಿಯಮ ಗಾಳಿಗೆ ತೂರಿ 2015-16 ರಿಂದ 2019-20 ರವಗೆ 14ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ ನಡೆಸಿದ್ದು, ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ವಾಭಿಮಾನ ಕನ್ನಡ ಸೇನೆ ಕಾರ್ಯಕರ್ತರು ಜಿಪಂ ಉಪ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

Advertisement

ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ಮಾಡದೇ ಬಿಲ್‌ ಸೃಷ್ಟಿಸಿ ಸರ್ಕಾರದ ಹಣ ದುರ್ಬಳಕೆ ಮಾಡಿದ್ದು, ಪ್ರಸಕ್ತ ಸಾಲಿನ 9 ಲಕ್ಷ ರೂ. ಹಣ ಡ್ರಾ ಮಾಡಲಾಗಿದೆ ಎಂದು ದೂರಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದವರಿಗೆ ಮಂಜೂರಾದ ವಸತಿ ಮನೆಗಳನ್ನು ಗ್ರಾಮಸಭೆ, ವಾರ್ಡ್ ಗಳಲ್ಲಿ ಚರ್ಚೆ ಮಾಡಿ ಫಲಾನುಭವಿಗಳ ಆಯ್ಕೆ ಮಾಡದೇ ಸದಸ್ಯರು ಸೂಚಿಸಿದ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ.

ಇದರಿಂದ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುವಂತಾಗಿದೆ. ಶೌಚಾಲಯ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿದವರಿಗೆ ಕೂಲಿ ನೀಡುತ್ತಿಲ್ಲ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಗ್ರಾಪಂ ಅಧ್ಯಕ್ಷ ಹಾಗೂ ಪಿಡಿಒ, ಜೆಇ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧ್ಯಕ್ಷ ಯಲ್ಲಪ್ಪ ಕುರಕುಂದಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next