Advertisement

ಕನಿಷ್ಠ ವೇತನ ಪಾವತಿಗೆ ಆಗ್ರಹ

02:40 AM Jul 05, 2019 | Sriram |

ಬೆಂಗಳೂರು: ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಕನಿಷ್ಠ 13,200 ರೂ. ವೇತನ ನೀಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ವಿಧಾನಮಂಡಲ ಅಧಿವೇಶನದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.

Advertisement

ವಿಧಾನ ಪರಿಷತ್‌ ಸದಸ್ಯ ರಾದ ಎಸ್‌.ವಿ.ಸಂಕನೂರ, ಆಯನೂರು ಮಂಜು ನಾಥ್‌, ಅರುಣ್‌ ಶಹಾಪುರ, ಅ.ದೇವೇಗೌಡ, ಸುನಿಲ್ ಸುಬ್ರಮಣಿ ಅವರೊಂದಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಅವರನ್ನು ಗುರುವಾರ ಭೇಟಿಯಾಗಿ ಮನವಿ ಸಲ್ಲಿಸಿದ ಬಳಿಕ ಕೋಟ ಶ್ರೀನಿವಾಸ ಪೂಜಾರಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ 6000ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ಮೇಲ್ವಿಚಾರಕರು ಸಾಕಷ್ಟು ಹೋರಾಟ ನಡೆಸಿದರೂ ಸ್ಪಂದಿಸದಿದ್ದಾಗ ಅಂತಿಮವಾಗಿ ನ್ಯಾಯಾಲಯದ ಸೂಚನೆಯಂತೆ ಕನಿಷ್ಠ 13,200 ರೂ. ವೇತನ ನೀಡಲು 2016ರ ಆ. 5ರಂದು ಸರ್ಕಾರಿ ಆದೇಶ ಹೊರಡಿಸಲಾಗಿತ್ತು. ಹಾಗಾಗಿ 13,200 ರೂ. ವೇತನ ಸಿಗುವ ವಿಶ್ವಾಸದಲ್ಲಿ ಗ್ರಂಥಾಲಯ ಮೇಲ್ವಿಚಾರಕರಿದ್ದರು. ಆದರೆ ಗ್ರಂಥಾಲಯ ಇಲಾಖೆ ಸೇವಾ ಸಮಯವನ್ನು ಎಂಟು ಗಂಟೆಯಿಂದ ನಾಲ್ಕು ಗಂಟೆಗೆ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.

ಪದವಿ ಶಿಕ್ಷಕರಿಗೂ ನ್ಯಾಯ ಒದಗಿಸಿ: ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 6-8 (ಜಿ.ಪಿ.ಟಿ) ವೃಂದಕ್ಕೆ ವಿಲೀನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next