Advertisement

ವಾಲ್ಮೀಕಿ ಭವನಕ್ಕೆ ಹೆಚ್ಚಿನ ಅನುದಾನಕ್ಕೆ ಮನವಿ

06:38 AM Jun 10, 2020 | Suhan S |

ಹಿರೇಕೆರೂರ: ಇಲ್ಲಿನ ವಾಲ್ಮೀಕಿ ಭವನದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಅವರನ್ನು ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನಿಸಲಾಯಿತು.

Advertisement

ಸಾನ್ನಿಧ್ಯ ವಹಿಸಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಪಟ್ಟಣದಲ್ಲಿ ವಾಲ್ಮೀಕಿ ಭವನ ಕಟ್ಟಡ ಮೊದಲ ಹಂತದ ರೂ 1 ಕೋಟಿ ವೆಚ್ಚದಲ್ಲಿ ಕಾಮಗಾರಿ ಮುಗಿದಿದ್ದು, ಈಗ ಮತ್ತೆ ರೂ. 1 ಕೋಟಿ ಮಂಜೂರಾಗಿದೆ. ಇದಕ್ಕೆ ಇನ್ನೂ ರೂ. 1.50 ಕೋಟಿ ಹೆಚ್ಚಿನ ಅನುದಾನ ನೀಡಿ ರೂ. 3.50 ಕೋಟಿ ವೆಚ್ಚದಲ್ಲಿ ಜಿಲ್ಲೆಯಲ್ಲಿಯೇ ಮಾದರಿ ವಾಲ್ಮೀಕಿ ಭವನ ನಿರ್ಮಿಸಲು ಸಂಬಂಧಪಟ್ಟ ಸಚಿವರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಇದಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಹಾಗೂ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಸಹಮತ ಸೂಚಿಸಿದ್ದಾರೆ ಎಂದು ತಿಳಿಸಿದರು. ಸಂಘದ ಅಧ್ಯಕ್ಷ ಜಿ.ಎಚ್‌. ತಳವಾರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಎನ್‌.ಎಂ. ಈಟೇರ, ವಾಲ್ಮೀಕಿ ನಾಯಕ ನೌಕರರ ಸಂಘದ ಅಧ್ಯಕ್ಷ ವೈ.ಪಿ. ಜಿಗಳೂರ, ಕಾರ್ಯದರ್ಶಿ ಪಿ.ಎಸ್‌. ಸಾಲಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆಂಜನೇಯ ಹುಲ್ಯಾಳ, ರಟ್ಟಿàಹಳ್ಳಿ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ತಳವಾರ, ಲಕ್ಷ್ಮಣ ನಾಯ್ಕರ್‌, ಹನುಮಂತಪ್ಪ ಮೇಗಳಮನಿ, ಆರ್‌.ಎಫ್‌.ಹುಲ್ಲತ್ತಿ, ರಮೇಶ ಚಿಕ್ಕೇರೂರ, ಲಿಂಗರಾಜ ನಾಯ್ಕರ್‌ ಜಿ.ಎಚ್‌.ಅಗಸಿಬಾಗಿಲ, ಐ.ಬಿ. ಕಡೇಮನಿ, ಜಿ.ಕೆ. ಸುಳಗನ್ನಿ, ಜಗದೀಶ ಗೋಣಗೇರಿ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next