Advertisement

ಶಾಲೆ ಮಂಜೂರಾತಿಗೆ ಆಗ್ರಹ

05:28 PM Nov 22, 2020 | Suhan S |

ಮಸ್ಕಿ: ತಾಲೂಕಿನ ಬುದ್ದಿನ್ನಿ (ಎಸ್‌) ಗ್ರಾಮಕ್ಕೆ ಪ್ರೌಢಶಾಲೆ ಮಂಜೂರಾತಿಗೆ ಆಗ್ರಹಿಸಿ ಬುದ್ದಿನ್ನಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು.

Advertisement

ಪಟ್ಟಣದ ಗಾಂಧಿ ನಗರದ ಪ್ರವಾಸಿ ಮಂದಿರದಿಂದ ಆರಂಭಗೊಂಡ ಪ್ರತಿಭಟನಾ ರ್ಯಾಲಿ, ಅಶೋಕ ವೃತ್ತ, ಅಗಸಿ, ದೈವದಕಟ್ಟೆ, ಮೇನ್‌ ಬಜಾರ್‌, ಕನಕ ವೃತ್ತ, ವಾಲ್ಮೀಕಿ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಸೀಲ್‌ ಕಚೇರಿ ತಲುಪಿತು.

ತಹಶೀಲ್ದಾರ್‌ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ನಾಗರಡ್ಡಿ ದೇವರಮನಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸರ್ಕಾರ ಕೋಟ್ಯಂತರ ರೂ. ವ್ಯಯಿಸಿ ಶಾಲಾ ಕಟ್ಟಡಗಳನ್ನು ಕಟ್ಟಿದೆ. ಆದರೆ, ಶಿಕ್ಷಣ ಇಲಾಖೆ ಮಾತ್ರ ಪ್ರೌಢಶಾಲೆಆರಂಭಿಸಲು ಅನುಮತಿ ನೀಡದೇಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲು ಹೊರಟಿದೆ. ಪ್ರೌಢಶಾಲೆ ಆರಂಭಿಸಲು ಅನುಮತಿ ನೀಡಲು ಆಗದಿದ್ದರೆ ಶಾಲಾ ಕಟ್ಟಡ ಕಟ್ಟಿಸುವಅವಶ್ಯಕತೆ ಏನಿತ್ತು? ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ಬೇಕಾದರೆ ಯಾವುದೇ ನಿಯಮಗಳು ಅಡ್ಡಿ ಬರುವುದಿಲ್ಲ. ಆದರೆ, ಸರ್ಕಾರಿ ಶಾಲೆಗಳ ಅನುಮತಿಗಾಗಿ ಏಕೆ? ಇಷ್ಟೊಂದು ಬೇಜವಾಬ್ದಾರಿ ಎಂದು ಆಕ್ರೋಶ ಹೊರ ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next