Advertisement

ನಗರದಲ್ಲಿ ಗಡಿಪಾರು ಕೇಂದ್ರ ಸ್ಥಾಪನೆಗೆ ಮನವಿ

11:51 AM Aug 03, 2018 | Team Udayavani |

ಬೆಂಗಳೂರು: ನಗರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರಿಂದ ಹೆಚ್ಚಾಗುತ್ತಿರುವ ಸಮಸ್ಯೆಗಳ ನಿಯಂತ್ರಣಕ್ಕಾಗಿ ಗಡಿಪಾರು ಕೇಂದ್ರ ಸ್ಥಾಪಿಸುವಂತೆ ಕೋರಿ ರಾಜ್ಯ ಬಿಜೆಪಿ ಸಂಸದರು, ಶಾಸಕರು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರಿಗೆ ಮನವಿ ಮಾಡಿದ್ದಾರೆ. ಸಂಸದ ಪಿ.ಸಿ.ಮೋಹನ್‌, ಶಾಸಕರಾದ ಅರವಿಂದ ಲಿಂಬಾವಳಿ, ದತ್ತಾತ್ರೇಯ ಪಾಟೀಲ್‌ ಅವರ ನಿಯೋಗ ಇತ್ತೀಚೆಗೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

Advertisement

ನಗರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ದೇಶದ್ರೋಹಿ ಚಟುವಟಿಕೆಗಳು, ವೇಶ್ಯಾವಾಟಿಕೆ, ಮಾದಕ ವಸ್ತು ಮರಾಟ, ಮನೆಗಳ್ಳತನ ಇತರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ ಎಂಬ ಆತಂಕವನ್ನು ನಿಯೋಗ ವ್ಯಕ್ತಪಡಿಸಿದೆ.

ಇಂತಹವರ ವಿರುದ್ಧ ವಿದೇಶಿ ಕಾಯ್ದೆಯಡಿ ಕ್ರಮ ಜರುಗಿಸಲು ಅವಕಾಶವಿದ್ದರೂ ಬೆಂಗಳೂರಿನಲ್ಲಿ ಗಡಿಪಾರು ಕೇಂದ್ರವಿಲ್ಲದ ಕಾರಣ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೇ ಗಡಿಪಾರು ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳುವ ಮೂಲಕ ಅಕ್ರಮ ಬಾಂಗ್ಲಾ ವಲಸಿಗರ ದುಷ್ಕೃತ್ಯಗಳಿಗೆ ಕಡಿವಾಣ ಹಾಕಬಹುದು ಎಂದು ಕೋರಿದ್ದಾರೆ. ಈ ಕುರಿತು ಚರ್ಚಿಸುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next