ಕಲಬುರಗಿ: ಈಶಾನ್ಯ ಸಾರಿಗೆ ಸಂಸ್ಥೆ ಅಭಿವೃದ್ಧಿ ಮಾಡಲು ಹಾಗೂ ಹೈಕ ಭಾಗದ ಜನರಿಗೆ ಉತ್ತಮ ಸಾರಿಗೆ ನೀಡುವ ನಿಟ್ಟಿನಲ್ಲಿ ಸಹಕಾರ ಹಾಗೂ ಅನುದಾನ ನೀಡುವಂತೆ ಸಾರಿಗೆ ನಿಗಮದ ಅಧ್ಯಕ್ಷ ಮಹ್ಮದ ಇಲಿಯಾಸ್ ಸೇಠ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಹೈಕ ಭಾಗದಲ್ಲಿನ ಬೆಳವಣಿಗೆ ಹಾಗೂ ಅವಶ್ಯಕ ಇರುವ ಅನುದಾನದ ಕುರಿತು ಗಮನ ಸೆಳೆದರು.
ಈಶಾನ್ಯ ಸಾರಿಗೆ ಸಂಸ್ಥೆಗೆ 1250 ಹೊಸ ಬಸ್‌ಗಳ ಪ್ರಸ್ತಾವನೆಗೆ ಸರಕಾರ ಅನುಮೋದನೆ ನೀಡಿದೆ. ಮುಂದಿನ ದಿನಗಳಲ್ಲಿ ಖರೀದಿ ಕಾರ್ಯಾಚರಣೆ ಆರಂಭಿಸಲಾಗುವುದು. ಆದರೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಶೆಲ್ಟರ್‌ಗಳ ಕೊರತೆ ತೀವ್ರವಾಗಿದೆ. ಈ ಕುರಿತು ಹೈದ್ರಾಬಾದ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾವು ಕೂಡಲೇ ಮಂಜೂರಾತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಸಚಿವರಾದ ಎಚ್.ಎಂ.ರೇವಣ್ಣ,
ರಾಮಲಿಂಗಾರೆಡ್ಡಿ, ನಾಲ್ಕು ಸಾರಿಗೆ ನಿಗಮದ ಅಧ್ಯಕ್ಷರು, ಎಂಡಿಗಳು ಹಾಗೂ ಅಧಿಕಾರಿಗಳು ಇದ್ದರು.