ಬೆಂಗಳೂರು: ರಾಜ್ಯದಲ್ಲಿ ಎಂಇಎಸ್ ಮೇಲೆ ನಿಷೇಧ ಹೇರುವಂತೆ ಒತ್ತಾಯಿಸಿ ಡಿ.31ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಬೆಂಬಲ ನೀಡುವಂತೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಸಾರಾ ಗೋವಿಂದು ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರರು ಭಾನುವಾರ ಮೆಜೆಸ್ಟಿಕ್‌ನಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಚಾಲಕರಿಗೆ ಮತ್ತು ನಿರ್ವಾಹಕರಿಗೆ ಮನವಿ ಮಾಡಿದರು.
ಈಗಾಗಲೇ ಕರೆ ನೀಡಲಾಗಿರುವ ಬಂದ್ ನಡೆಯಲಿದೆ. ಅವತ್ತು ಯಾವುದೇ ಕಾರಣಕ್ಕೂ ಬಸ್‌ಗಳನ್ನು ರಸ್ತೆಗೆ ಇಳಿಸಬೇಡಿ ಎಂದು ಮನವಿ ಮಾಡಿದರು. ಕನ್ನಡ ಸ್ವಾಭಿಮಾನಕ್ಕಾಗಿ ಈ ಬಂದ್ ಗೆ ಕರೆ ನೀಡಲಾಗಿದೆ. ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.
ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಮುತ್ತ ಪ್ರಚಾರ ನಡೆಸಿದ ಕನ್ನಡಪರ ಕಾರ್ಯಕರ್ತರು ಸಾರ್ವಜನಿಕರು ಬಂದ್‌ನಲ್ಲಿ ಭಾಗವಹಿಸಬೇಕು ಎಂದು ಹೇಳಿದರು. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಪದೇ ಪದೆ ಎಂಇಎಸ್ ಪುಂಡಾಟಿಕೆ ಮೆರೆಯುತ್ತಿದೆ. ಆ ಸಂಘಟನೆಗೆ ನಿಷೇಧ ಹೇರಬೇಕು ಎಂಬ ಉದ್ದೇ ಶದಿಂದ ಬಂದ್‌ಗೆ ಕರೆ ನೀಡಲಾಗಿದೆ.
ಕರ್ನಾಟಕ ಬಂದ್‌ಗೆ ಈಗಾಗಲೇ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಈಗಾಗಲೇ ಮಂತ್ರಿ ಮಹಲ್ ಸೇರಿದಂತೆ ಹಲವು ಮಹಲ್‌ಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿವೆ ಎಂದರು