Advertisement

ಅತಿಥಿ ಉಪನ್ಯಾಸಕರ ಮನವಿ

09:33 PM Jan 08, 2022 | Team Udayavani |

ಲಿಂಗಸುಗೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸ್ಟೂಡೆಂಟ್‌ ಇಸ್ಲಾಮಿಕ್‌ ಸಂಘಟನೆ ಕಾರ್ಯಕರ್ತರು ಗುರುವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

Advertisement

ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,183 ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತರಗತಿಗಳನ್ನು ತೊರೆದು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಶಿಕ್ಷಣವು ಸಂವಿಧಾನದ ಮೂಲಭೂತನ ಹಕ್ಕಾಗಿದೆ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ.

ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಶಿಕ್ಷಣದ ಬಹಳಷ್ಟು ಪ್ರಭಾವ ಬೀರಲಿದೆ. ಕೂಡಲೇ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು. ಅವರಿಗೆ ಸೇವಾ ಭದ್ರತೆ ಒದಗಿಸಿ ತರಗತಿಗಳನ್ನು ಎಂದಿನಂತೆ ನಡೆಸಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು. ಸಂಘಟನೆ ಅಧ್ಯಕ್ಷ ಅಲ್ಲಾ, ಶೇಖ ಶೋಹಿಲ್‌, ಶೋಹಿಲ್‌, ಅಬ್ದುಲ್‌ ಅಜೀಜ್‌, ಜುನೈದ್‌, ಜಹಿರುದ್ದೀನ್‌ ಹಾಗೂ ಇನ್ನಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next