Advertisement

ಡೊನೇಷನ್‌ ಹಾವಳಿ ತಡೆಗಟ್ಟಲು ಎಸ್‌ಎಫ್‌ಐ ಆಗ್ರಹ

04:27 PM Aug 19, 2020 | Suhan S |

ರಾಣಿಬೆನ್ನೂರ: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಡೊನೇಷನ್‌ ಹಾವಳಿ ತಡೆಗಟ್ಟಲು ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್‌ ಪ್ರಾಧಿಕಾರ ರಚಿಸಬೇಕು. ಕೋವಿಡ್‌ ಸಂದರ್ಭದಲ್ಲಿ ಶಾಲೆ ಆರಂಭಗೊಳ್ಳದಿದ್ದರೂ ಪಾಲಕರಿಂದ ಶುಲ್ಕ ವಸೂಲಿಗೆ ಮುಂದಾಗಿರುವ ಕ್ರಮವನ್ನು ಖಂಡಿಸಿ, ಎಸ್‌ಎಫ್‌ಐ ಕಾರ್ಯಕರ್ತರು ಶುಕ್ರವಾರ ಉಪತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Advertisement

ಕೋವಿಡ್ ಹರಡುವಿಕೆ ಮತ್ತು ಲಾಕ್‌ ಡಾನ್‌ನಿಂದಾಗಿ ವಿದ್ಯಾರ್ಥಿಗಳ ಬದುಕುಸಂಕಷ್ಟಕ್ಕೆ ಸಿಲುಕಿದೆ. ಜನರು ಉದ್ಯೋಗಕ್ಕಾಗಿ ಪರದಾಡುತ್ತಾ ಆದಾಯವಿಲ್ಲದೇ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲೂ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್‌ ಹಾಗೂ ಶಾಲಾ-ಕಾಲೇಜುಗಳ ಶುಲ್ಕ ಏರಿಕೆ ಮಾಡಿವೆ. ಆನ್‌ಲೈನ್‌ ತರಗತಿಗಳ ಹೆಸರಿನಲ್ಲಿ ಪೋಷಕರಿಂದ ಶುಲ್ಕ ವಸೂಲಿ ಮಾಡುವನೆಪದಲ್ಲಿ ಹಗಲು ದರೋಡೆ ಮಾಡಲು ಮುಂದಾಗಿವೆ ಎಂದು ಆರೋಪಿಸಿದರು.

ಈ ನಿಯಮಗಳ ಪ್ರಕಾರ ಸರ್ಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು 500 ರೂ. ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು 600 ರೂ. ಮಾತ್ರ ಅಭಿವೃದ್ಧಿ ಶುಲ್ಕ ಸಂಗ್ರಹಿಸಲು ಅವಕಾಶವಿದೆ. ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ. ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳು, ಪೋಷಕರು ಶಿಕ್ಷಣ ಸಂಸ್ಥೆಗಳನ್ನೊಳಗೊಂಡಂತೆ ಸಮಿತಿ ರಚಿಸಿ ಅಲ್ಲಿ ಈ ಕುರಿತು ಚರ್ಚಿಸಬೇಕು. ಆದರೆ ಅದು ಎಲ್ಲಿಯೂ ಜಾರಿಯಾಗುತ್ತಿಲ್ಲ. ಡೊನೇಷನ್‌ (ವಂತಿಗೆ) ವಸೂಲಿಯನ್ನು ನಿಯಂತ್ರಿಸಲು ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್‌ ಪ್ರಾಧಿಕಾರವನ್ನು ರಚಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ತಾಲೂಕು ಕಾರ್ಯದರ್ಶಿ ಶ್ರೀಕಾಂತ ಬಾರ್ಕಿ, ಬೀರೇಶ ಹೀಲದಹಳ್ಳಿ, ಮಾರುತಿ ತಳವಾರ, ಶಿವರಾಜ ದೊಡ್ಡಬುಡ್ಡಾಳರ, ಪ್ರದೀಪ ಬಣಕಾರ, ಬೀರೇಶ ಅಂಬಿಗೇರ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next