Advertisement

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

08:37 PM Jan 04, 2025 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸೈನಿಕ ಶಾಲೆ ಹಾಗೂ ಮಿಲಿಟರಿ ನೆಲೆ ಸ್ಥಾಪನೆ ಸೇರಿದಂತೆ ಪ್ರಮುಖ ರಕ್ಷಣಾ ಮೂಲಸೌಕರ್ಯ ಒದಗಿಸುವ ಒಳಗೊಂಡ ಬೇಡಿಕೆಗಳ ಸಂಸದ ಕ್ಯಾ.ಬ್ರಿಜೇಶ್‌ ಚೌಟ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರನ್ನು ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿದರು.

Advertisement

ಮಂಗಳೂರಿನಲ್ಲಿ ಸೈನಿಕ ಶಾಲೆ ಆರಂಭಿಸುವ ಜೊತೆಗೆ ಈ ಭಾಗದಲ್ಲಿ ಮಿಲಿಟರಿ ಬೇಸ್‌ ಸ್ಥಾಪಿಸುವುದರಿಂದ ಯುವಜನತೆ ದೇಶ ಸೇವೆಯತ್ತ ಪ್ರೇರೇಪಿಸುವುದಕ್ಕೆ ಅನುಕೂಲವಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ವಿಶ್ವ ದರ್ಜೆ ಶಿಕ್ಷಣ ಸಂಸ್ಥೆಗಳಿರುವ ಹಿನ್ನೆಲೆಯಲ್ಲಿ ಸೈನಿಕ ಶಾಲೆ ಸ್ಥಾಪಿಸುವುದು ಶೈಕ್ಷಣಿಕವಾಗಿಯೂ ಹೆಚ್ಚಿನ ಅನುಕೂಲ ಒದಗಿಸಲಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.

ರಕ್ಷಣಾ ಕ್ಷೇತ್ರಕ್ಕೆ ಮಂತ್ರಿಯಾಗಿ ಗಮನಾರ್ಹ ಕೊಡುಗೆ ನೀಡಿರುವ ಮಾಜಿ ರಕ್ಷಣಾ ಸಚಿವ ಜಾರ್ಜ್‌ ಫೆರ್ನಾಂಡೀಸ್‌, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಕ್ಯಾಪ್ಟನ್‌ ಪ್ರಾಂಜಲ್‌ ಹಾಗೂ ಕಮಾಂಡರ್‌ ಜಾರ್ಜ್‌ ಮಾರ್ಟಿಸ್‌ ಅವರ ಬಲಿದಾನವನ್ನು ಸದಾ ಸ್ಮರಿಸುವಂತಹ ಕೆಲಸ ಕಾರ್ಯಗಳು ಮಂಗಳೂರಿನಲ್ಲಿ ರಕ್ಷಣಾ ಸಚಿವಾಲಯದಿಂದ ಆಗಬೇಕು ಎಂದು ಕ್ಯಾ.ಚೌಟ ಕೋರಿದ್ದಾರೆ.

ತಮ್ಮ ಭೇಟಿ ವೇಳೆ ಕ್ಯಾ. ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯರೂಪಕ್ಕೆ ತರಬಹುದಾದ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ರಾಜನಾಥ್‌ ಸಿಂಗ್‌ ರಿಂದ ಮಾರ್ಗದರ್ಶನ ಕೂಡ ಪಡೆದುಕೊಂಡರು. ಇದೇ ವೇಳೆ ಕ್ಯಾ.ಚೌಟ ಅವರು ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಕರಾವಳಿಯ ಸಂಸ್ಕೃತಿಯ ಸಂಕೇತವಾದ ಕಂಬಳದ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next