ಮಡಿಕೇರಿ: ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಪ್ರವಾಸಿಗರ ಪ್ರವೇಶದ ಮೇಲೆ ವಿಧಿಸಿರುವ ನಿರ್ಬಂಧವನ್ನು ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲೂಕುಗಳಲ್ಲಿ ಸಡಿಲಗೊಳಿಸುವಂತೆ ಮತ್ತು ಸೆ. 9ರ ಬಳಿಕ ಜಿಲ್ಲಾವ್ಯಾಪ್ತಿಯಲ್ಲಿ ನಿರ್ಬಂಧವನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಕೊಡಗು ಜಿಲ್ಲಾ ಹೋಟೆಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಶನ್ ಜಿಲ್ಲಾಡಳಿತವನ್ನು ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಶನ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಪ್ರಾಕೃತಿಕ ವಿಪತ್ತು ನಿರ್ವಹಣೆಯಲ್ಲಿ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜತೆಗೆ, ಹೋಟೆಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಉದ್ಯಮಗಳಲ್ಲಿ ತೊಡಗಿಸಿ ಕೊಂಡಿರುವ 15 ರಿಂದ 20 ಸಾವಿರ ಮಂದಿಯ ಅತಂತ್ರ ಬದುಕನ್ನು ಗಮನಿಸಿ ಈಗಿರುವ ನಿರ್ಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಮನವಿ ಮಾಡಿದರು.
ಸೆ.
3ರ ವರೆಗೆ ಮಾಹಿತಿ ನೀಡಲು ಅವಕಾಶ: ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳ ವೈಯಕ್ತಿಕ ವಿವರಗಳನ್ನು ಸಂಗ್ರಹಿಸುವ ಕಾಲಾವಧಿಯನ್ನು ಸೆ.3ರ ವರೆಗೆ ವಿಸ್ತರಿಸಲಾಗಿದೆ.
ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಸ್ಥರು ತಾವು ಇರುವ ತಾತ್ಕಾಲಿಕ ಶಿಬಿರಗಳಲ್ಲಿ , ಗ್ರಾಮಗಳಲ್ಲಿ, ಗ್ರಾಮದಲ್ಲಿ/ಶಿಬಿರದಲ್ಲಿ ಇರದೆ ಬೇರೆ ಕಡೆ ಇರುವ ಸಂತ್ರಸ್ತರು ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ ,
ತಹಶೀಲ್ದಾರ್ ಅವರನ್ನು ಸಂಪರ್ಕಿ ಸಬಹುದು ಎಂದು ಡೀಸಿ ಶ್ರೀವಿದ್ಯಾ ತಿಳಿಸಿದ್ದಾರೆ.
ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 08272-221077/ 221088/ 221099, ತಹಶೀಲ್ದಾರ್-9845887257 ನ್ನು ಸಂಪರ್ಕಿಸಬಹುದು.