ದೇವನಹಳ್ಳಿ: ಬಸ್ ಸಂಖ್ಯೆ ಹೆಚ್ಚಳ ಹಾಗೂ ಸಕಾಲಕ್ಕೆ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ನಗರದ ಹೊಸ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ ಸಮಯದಲ್ಲಿ ಬಸ್‌ಗಳಿಲದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ.ಚಿಕ್ಕಬಳ್ಳಾಪುರದ ವಿವಿಧ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲ.
ಅಲ್ಲದೇ, ಕೆಲ ಬಸ್‌ಗಳಲ್ಲಿ ವಿದ್ಯಾರ್ಥಿ ಬಸ್ ನಿಬಂಧಿಸಲಾಗಿದೆ.ಇದರಿಂದ ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರಕ್ಕೆ ಬಸ್ ಸೌಲಭ್ಯ ಇದ್ದು ಇಲ್ಲದಂತಾಗಿದೆ.ಹೆಚ್ಚಿನ ಬಸ್‌ಗಳು ಇಲ್ಲದೇ ಇರುವುದುರಿಂದ ಒಂದೇ ಬಸ್‌ನಲ್ಲಿ ವಿದ್ಯಾರ್ಥಿಗಳು ನೂಕು ನುಗ್ಗಲು ಹಾಗೂ ಬಸ್ ಬಾಗಿಲು ಬಳಿ ನಿಂತು ತೆರಳಬೇಕಾಗಿದೆ.
ಹಲವು ಬಾರಿ ವಿದ್ಯಾರ್ಥಿಗಳು ಜೀವ ಕೈಯಲ್ಲಿಡಿದು ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ ಎಂದು ವಿದ್ಯಾರ್ಥಿ ಹೇಮಂತ್ ಅಳಲು ತೋಡಿಕೊಂಡರು. ವಿದ್ಯಾರ್ಥಿ ಆಕಾಶ್ ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ತಡೆರಹಿತ ಬಸ್‌ಗಳಲ್ಲಿ ವಿದ್ಯಾರ್ಥಿಗಳ ಪಾಸ್‌ಗೆ ಮಾನ್ಯತೆ ನೀಡುವುದಿಲ್ಲ. ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋದರೆ ಮಾತ್ರ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯ.
ನಮ್ಮ ಭವಿಷ್ಯದ ಜೊತೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ವಿದ್ಯಾರ್ಥಿ ಕಾಶ್ ಆರೋಪಿಸಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಸಾಥ್ ನೀಡಿದ ಭಾರತೀಯ ಮಾನವ ಹಕ್ಕುಗಳ ಜಾಗೃತಿ ಸಮಿತಿ ಜಿಲ್ಲಾಧ್ಯಕ್ಷ ಗಜೇಂದ್ರ ಮಾತನಾಡಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಡ್ರೈವರ್‌ಗಳು ನಗರಕ್ಕೆ ಬರದೆ ಬೆ„ಪಾಸ್‌ನಲ್ಲಿಯೇ ತಿರುಗಿಸಿಕೊಂಡು ಹೋಗುತ್ತಾರೆ. ಕಲೆಕ್ಷನ್ ಆಗುತ್ತಿಲ್ಲವೆಂದು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸದೇ ಇರುವುದು ತರವಲ್ಲ.
ಸುಮಾರು ದಿನನಿತ್ಯ 500-600 ವಿದ್ಯಾರ್ಥಿಗಳು ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ಬಸ್‌ಗಾಗಿ ಸಮಸ್ಯೆ ಎದುರಿಸುವಂತೆ ಆಗಿದೆ.ಇನ್ನಾದರೂ, ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಸರಿಯಾದ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಕಡೆ ಹೆಚ್ಚಿನ ಬಸ್ ಸಂಚಾರ ಆರಂಭಿಸಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳಾದ ಹರ್ಷ, ಕಾರ್ತಿಕ್, ಅಂಜನ್, ಮನೋಜ್, ಮಾರುತಿ, ಐಶ್ವರ್ಯ, ರಂಜಿತ, ರೋಹಿಣಿ, ತಂಜಿಯ ಮತ್ತಿತರರು ಇದ್ದರು.