Advertisement

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

12:58 AM Jun 16, 2024 | Team Udayavani |

ಬೆಂಗಳೂರು: ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆ “ನೀಟ್‌’ ಅನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ. ಈ ಸಂಬಂಧ ಕೇಂದ್ರಕ್ಕೆ ನಾನು ಮನವಿ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದ್ದು, ನೀಟ್‌ ಅಕ್ರಮ ಗಂಭೀರ ಅಪರಾಧವಾಗಿದೆ. ಹೀಗಾಗಿ ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು. ರಾಜ್ಯಗಳು ನಡೆಸುವ ಪರೀಕ್ಷೆಯಲ್ಲಿ ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಲಿ. ಅಂಥವರಿಗೆ ಮೀಸಲಾತಿಯನ್ನೂ ನೀಡಬಹುದು. ಈ ಸಂಬಂಧ ಕೇಂದ್ರಕ್ಕೂ ನಾನು ಮನವಿ ಮಾಡುತ್ತೇನೆ’ ಎಂದು ಹೇಳಿದರು.

ಉತ್ತರ ಭಾರತದ ರಾಜ್ಯಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಹೀಗಾಗಿ ನಮ್ಮ ಮಕ್ಕಳಿಗೆ ತಾರತಮ್ಯವಾಗುತ್ತಿದೆ. ನಮ್ಮ ಮಕ್ಕಳಿಗೆ ನ್ಯಾಯ ಒದಗಿಸಲು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next