Advertisement

ಅತಿಥಿ ಉಪನ್ಯಾಸಕರನ್ನು ಮುಂದುವರಿಸಲು ಮನವಿ

10:26 AM Aug 11, 2020 | Suhan S |

ಕಲಬುರಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಈಗಾಗಲೇ ಸೇವೆ ಸಲ್ಲಿಸುತ್ತಿರುವವರನ್ನೇ ಪ್ರಸಕ್ತ ಶೈಕ್ಷಣಿಕ ಸಾಲಿಗೂ ಮುಂದುವರಿಸಿ ಶೀಘ್ರವೇ ನೇಮಕಾತಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಪ್ರಭಾರ ಕುಲಪತಿ ಪ್ರೊ| ಚಂದ್ರಕಾಂತ ಯಾತನೂರು ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

Advertisement

ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರು ಪ್ರಸ್ತುತ ತೀವ್ರ ಸಂಕಷ್ಟದಲ್ಲಿದ್ದಾರೆ. ಕೋವಿಡ್ ಮಹಾಮಾರಿಯಿಂದ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಸಂದರ್ಭದಲ್ಲಿ ವಿಶ್ವವಿದ್ಯಾಲಯ ಅವರಿಗೆ ನೆರವಾಗುವುದು ತುಂಬಾ ಅವಶ್ಯಕವಾಗಿದೆ ಎಂದು ಕುಲಪತಿ ಅವರಿಗೆ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ| ಅರುಣ ಕುಮಾರ ಕುರನೆ ಮನವಿ ಮಾಡಿದರು.

ಕೋವಿಡ್‌-19 ಬಿಕ್ಕಟ್ಟಿನ ಸಂಕಷ್ಟದಲ್ಲಿ ಹೊಸದಾಗಿ ಅತಿಥಿ ಉಪನ್ಯಾಸಕರನ್ನು ಅಧಿ ಸೂಚನೆ ಹೊರಡಿಸಿ ನೇಮಕ ಮಾಡಬಾರದು. ಈ ಪ್ರಕ್ರಿಯೆಯಿಂದ ವಿಶ್ವವಿದ್ಯಾಲಯಕ್ಕೆ ಆರ್ಥಿಕವಾಗಿ ಹೊರೆಯಾಗಲಿದೆ. ಅಲ್ಲದೇ, ಹೊಸ ಉಪನ್ಯಾಸಕರನ್ನು ಸಮಯ ಹಿಡಿಯುವುದರಿಂದ ಈ ಸಾಲಿನ ಪರೀಕ್ಷೆ ಕಾರ್ಯ, ಪ್ರವೇಶ ಪ್ರಕ್ರಿಯೆ ಮತ್ತು ಶೈಕ್ಷಣಿಕ ಕಾರ್ಯ ಚಟುವಟಿಕೆಗಳಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಮನದಟ್ಟು ಮಾಡಿದರು.

ಅತಿಥಿ ಉಪನ್ಯಾಸಕರ ಸಂಘದ ಮನವಿ ಆಲಿಸಿ ಮಾತನಾಡಿದ ಪ್ರಭಾರ ಕುಲಪತಿ ಪ್ರೂ| ಚಂದ್ರಕಾಂತ ಯಾತನೂರು, ಅತಿಥಿ ಉಪನ್ಯಾಸರನ್ನು ಪ್ರಸಕ್ತ ಸಾಲಿನಲ್ಲಿ ಮುಂದುವರಿಸುವ ಬಗ್ಗೆ ಜು.11ರಂದು ಕರೆಯಲಿರುವ ಎಲ್ಲ ನಿಕಾಯದ ಡೀನರ್‌ ಸಭೆಯಲ್ಲಿ ಚರ್ಚಿಸಿ ನಿಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು. ಸಂಘದ ಗೌರವ ಅಧ್ಯಕ್ಷರು, ಕಾರ್ಯದರ್ಶಿಗಳು, ಉಪಾಧ್ಯಕ್ಷರು ಅತಿಥಿ ಉಪನ್ಯಾಸಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next