ಮುಳಬಾಗಿಲು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ಪ್ರತಿ ಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಚತುರ್ಥಿಯನ್ನು ಸಂಭ್ರಮ ದಿಂದ ಆಚರಣೆ ಮಾಡುವಂತೆ ಪೌರಾಯುಕ್ತ ಶ್ರೀನಿವಾಸ್‌ಮೂರ್ತಿ ಮನವಿ ಮಾಡಿದ್ದಾರೆ.
ನಗರಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಿಒಪಿ ವಿನಾಯಕನ ಮೂರ್ತಿಗಳನ್ನು ಯಾವುದೇ ಜಲಮೂಲಗಳಲ್ಲಿ ವಿಸರ್ಜನೆ ಮಾಡುವು ದನ್ನು ನಿರ್ಬಂಧಿಸಿ ಅಧಿಸೂಚನೆ ಹೊರಡಿಸ ಲಾಗಿದೆ. ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಯಲ್ಲಿ ಈಗಾಗಲೇ ವಿಸರ್ಜಿಸದೆ ಉಳಿದಿರುವ ಪಿಒಪಿ ಅಥವಾ ಬಣ್ಣದ ವಿಗ್ರಹಗಳನ್ನು ಪತ್ತೆ ಹಚ್ಚಿ, ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು. ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಿ ಶ್ರೆಡರ್‌ಗಳನ್ನು ಉಪ ಯೋಗಿಸಿಕೊಂಡು, ಒಂದೇ ಸ್ಥಳದಲ್ಲಿ ಧಾರ್ಮಿಕ ವಿಧಿ ವಿಧಾನಗಳಿಗೆ ಭಂಗವಾ ಗದಂತೆ ವಿಲೇವಾರಿ ಮಾಡಬೇ ಕಾಗಿದೆ ಎಂದರು.
ಕಾನೂನು ಕ್ರಮ: ತಾಲೂಕಿಗೆ ಬೇರೆ ರಾಜ್ಯದಿಂದ ಬರುವಂತಹ ಪಿಒಪಿ ವಿಗ್ರಹಗಳನ್ನು ತಡೆಗಟ್ಟುವುದಲ್ಲದೇ, ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪಿಒಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳಿಗೆ ವ್ಯಾಪಾರದ ಲೈಸೆನ್ಸ್ ನೀಡದಿರಲು ಮತ್ತು ಲೈಸೆನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿಸಿ, ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು ಎಂದು ಹೇಳಿದರು.
ಮೂರ್ತಿ ವಿಸರ್ಜಿಸಿ: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ನಗರಸಭೆಯು ನಿಗದಿಪಡಿಸಿರುವ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು ಎಂದು ತಿಳಿಸಿದರು.
ಸಮಿತಿ ರಚನೆ: ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‌ಗಳಲ್ಲಿ, ಕಲ್ಯಾಣಿಗಳಲ್ಲಿ ಹಸಿಕಸ(ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಸಮೇತ ಮೂರ್ತಿಗಳನ್ನು ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮ ವಹಿಸುವುದು, ವಾರ್ಡ್ ಮಟ್ಟದಲ್ಲಿ ಪೊಲೀಸರ ಸಹಯೋಗದೊಂದಿಗೆ ಸಮಿತಿ ಗಳನ್ನು ರಚಿಸಿ ಗಣೇಶ ವಿಗ್ರಹಗಳ ಸೂಕ್ತ ವಿಲೇವಾರಿಗೆ ಕ್ರಮಕೈಗೊಳ್ಳುವುದು ಎಂದು ಹೇಳಿದರು.
ಜಲಮೂಲಗಳ ಗುರುತು: ಗರಿಷ್ಠ 5 ಅಡಿ ಎತ್ತರದ ಮಣ್ಣಿನ ವಿಗ್ರಹಗಳನ್ನು ಮಾತ್ರ ತಯಾರಿಸಲು ಅನುಮತಿ ನೀಡುವುದು(ಮೂರ್ತಿಗಳ ಸರಾಸರಿ ತೂಕ, ಬಿರುಕು, ಸಾಗಾಣಿಕೆ ಹಾಗೂ ತ್ಯಾಜ್ಯ ಉತ್ಪನ್ನ ಪರಿಗಣಿಸಿ ಈ ಕ್ರಮ ಶಿಫಾರಸ್ಸು ಮಾಡಲಾಗಿದೆ), ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಸಾರ್ವಜನಿಕ ಗಣಪತಿ ಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸಲಾಗುವುದು ಎಂದು ವಿವರಿಸಿದರು.