Advertisement

ಫಲಿತಾಂಶ ಲೋಪದೋಷ ಸರಿಪಡಿಸಲು ಮನವಿ

09:24 AM Jul 30, 2019 | Suhan S |

ದಾವಣಗೆರೆ: ಪದವಿ ಫಲಿತಾಂಶದಲ್ಲಿ ಆಗಿರುವ ತಾಂತ್ರಿಕ ದೋಷ ಸರಿಪಡಿಸಬೇಕು ಎಂದು ಒತ್ತಾಯಿಸಿ ಸೋಮವಾರ ಆಲ್ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಸೇಷನ್‌(ಎಐಡಿಎಸ್‌ಒ) ನೇತೃತ್ವದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಎದುರು ಪ್ರತಿಭಟನೆ ನಡೆಸಲಾಯಿತು.

Advertisement

ದಾವಣಗೆರೆ ವಿಶ್ವವಿದ್ಯಾಲಯ ಪ್ರಕಟಿಸಿರುವ ಪದವಿ ಫಲಿತಾಂಶಗಳಲ್ಲಿ ಹಲವಾರು ತಾಂತ್ರಿಕ ದೋಷಗಳಿವೆ. 2ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳ ಫಲಿತಾಂಶ ಇದುವರೆಗೂ ಪ್ರಕಟಿಸಿಲ್ಲ. ಕೆಲವು ಪದವಿ ವಿದ್ಯಾರ್ಥಿಗಳಿಗೆ ಮರು ಮೌಲ್ಯಮಾಪನದ ಅಂತಿಮ ಅವಧಿ ಮುಗಿದ ನಂತರವೂ ಫಲಿತಾಂಶ ಪ್ರಕಟಿಸದೇ ಇರುವುದು ದುರಂತ ಎಂದು ಪ್ರತಿಭಟನಾಕಾರರು ದೂರಿದರು. ಹಲವು ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಹಲವಾರು ತಾಂತ್ರಿಕ ಲೋಪದೋಷಗಳು ಇವೆ. ಹಲವು ವಿದ್ಯಾರ್ಥಿಗಳಿಗೆ ಫಲಿತಾಂಶದಲ್ಲಿ 0 ಮತ್ತು -1 ಎಂದು ನಮೂದಿಸಲಾಗಿದೆ. ಉತ್ತೀರ್ಣರಾದ ವಿಷಯವನ್ನು ಮೌಲ್ಯಮಾಪನದ ನಂತರ ಬಂದ ಫಲಿತಾಂಶದಲ್ಲಿಯೂ ಅನುತ್ತೀರ್ಣವಾಗಿದೆ ಎಂದು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಬೇಜವಾಬ್ದಾರಿತನ ಅತ್ಯಂತ ಖಂಡನೀಯ. ಮರು ಮೌಲ್ಯಮಾಪನದಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನದ ಶುಲ್ಕ ಹಿಂದಿರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿ ಕುಲಸಚಿವರು, ತಾಂತ್ರಿಕ ಲೋಪದೋಷಗಳನ್ನು ಸರಿಪಡಿಸಲಾಗುವುದು. 2ನೇ ಸೆಮಿಸ್ಟರ್‌ನ ಫಲಿತಾಂಶವನ್ನು ಒಂದು ವಾರದೊಳಗೆ ಪ್ರಕಟಿಸುತ್ತೇವೆ. ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಸಂಘಟನೆ ಜಿಲ್ಲಾ ಕಾರ್ಯದರ್ಶಿ ನಾಗಜ್ಯೋತಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next