Advertisement

ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ಮನವಿ

09:52 AM Jun 24, 2019 | Team Udayavani |

ಗದಗ: ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ತುಂಗಭದ್ರಾ ನದಿಯ ಉದ್ದಕ್ಕೂ ಅಕ್ರಮ ಮರಳು ಗಣಿಗಾರಿಕೆ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ.

Advertisement

ಈ ಕುರಿತು ಸಂಘದ ರಾಜ್ಯಾಧ್ಯಕ್ಷ ವಿಠಲ ಗಣಾಚಾರಿ ನೇತೃತ್ವದಲ್ಲಿ ರೈತರು ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕ ಪ್ರಸನ್ನಕುಮಾರ ಅವರಿಗೆ ಮನವಿ ಸಲ್ಲಿಸಿ, ಗದಗ ಜಿಲ್ಲೆಯ ಮುಂಡರಗಿ, ಶಿರಹಟ್ಟಿ ಮತ್ತು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕು ಗಡಿಯಲ್ಲಿ ಹರಿಯುವ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ಸಾಗಿದೆ. ಕಾನೂನು ಬಾಹಿರ ಮತ್ತು ಅವೈಜ್ಞಾನಿಕವಾಗಿ ಚೈನ್‌ ಮಶಿನ್‌ಗಳನ್ನು ಬಳಸಿ ಮರಳು ತೆಗೆಯಲಾಗುತ್ತಿದೆ. ಜಿಪಿಎಸ್‌ ಅಳವಡಿಕೆಯಲ್ಲೂ ಭಾರೀ ಗೋಲ್ಮಾಲ್ ನಡೆಯುತ್ತಿದೆ ಎಂದು ಆರೋಪಿಸಿದರು.

ಗಣಿ ಮತ್ತು ವಿಜ್ಞಾನ ಇಲಾಖೆಯವರು ನದಿ ಪಾತ್ರದಲ್ಲಿ ಕಾಟಾಚಾರಕ್ಕೆ ವೀಕ್ಷಣೆ ಮಾಡಿದ್ದು, ವಾಸ್ತವ್ಯಕ್ಕೆ ವಿರುದ್ಧವಾಗಿ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಕೋರ್ಲಹಳ್ಳಿ ಪಾಯಿಂಟ್‌ನಲ್ಲಿ ಯಂತ್ರೋಪಕರಣ ಉಪಯೋಗಿಸಿ ಅಕ್ರಮ ಮರಳು ಗಣಿಕಾರಿಕೆ ನಡೆಸುತ್ತಿದ್ದಾರೆ. ಅದರಂತೆ ಎಲ್ಲ ಪಾಯಿಂಟ್‌ಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ಪರಿಸರಕ್ಕೆ ಮತ್ತು ಸರಕಾರಕ್ಕೆ ಅನ್ಯಾಯವೆಸಗುತ್ತಿದ್ದಾರೆ ಎಂದು ದೂರಿದ ಅವರು, ಈ ಕುರಿತು ಸಮಗ್ರವಾಗಿ ಪರಿಶೀಲಿಸಿ, ಆರೋಪಿತ ಮರಳು ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.

ಗಂಗಣ್ಣ ಹಾಲಚೌಡಾಳ, ಮಂಜುನಾಥ ಬಿ. ಬೆಳಗಟ್ಟಿ, ರಾಘು ಗೊಡಪಟ್ಟಿ, ಬಸುರಾಜ ಆನೇಪ್ಪನವರು, ಮಂಜು ಪಾಟೀಲ, ವಾಸು ಬಿಜ್ಜೂರು, ವಿರೂಪಾಕ್ಷಯ್ಯ ಹಿರೇಮಠ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next