Advertisement

ರೈತರಿಗೆ ಹಕ್ಕು ಪತ್ರ ನೀಡಲು ಆಗ್ರಹ

11:53 AM Jun 27, 2018 | Team Udayavani |

ಬೆಂಗಳೂರು: ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡು ಹಲವಾರು ವರ್ಷಗಳಿಂದ ವಾಸವಾಗಿರುವ ಬಡವರಿಗೆ ಹಕ್ಕು ಪತ್ರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪುರಭವನದ ಎದುರು ಮಂಗಳವಾರ ಪ್ರತಿಭಟನಾ ರ್ಯಾಲಿ ನಡೆಸಿದರು.

Advertisement

ಹಲವು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವ ಬಡ ರೈತರಿಗೆ ಉಳುಮೆ ಚೀಟಿ ನೀಡುವಂತೆ ಇದೇ ವೇಳೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ರಾಜ್ಯ ಉಪಾಧ್ಯಕ್ಷ ಎನ್‌.ವೆಂಕಟಾಚಲಯ್ಯ, ಈ ಹಿಂದಿನ ಸರ್ಕಾರ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಉಳುಮೆ ಪತ್ರ ನೀಡಲು ಮುಂದಾಗಿತ್ತು.

ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅದು ಕಾರ್ಯಗತವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಸಮಿಶ್ರ ಸರ್ಕಾರ ರೈತರಿಗೆ ಹಕ್ಕು ಪತ್ರ ನೀಡಬೇಕೆಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಪಾಲನೇತ್ರ ಮಾತನಾಡಿದರು. ಇದಕ್ಕೂ ಮುನ್ನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಮೆರವಣಿಗೆ ನಡೆಸಲಾಯಿತು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಂದ ಆಗಮಿಸಿದ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next