Advertisement

ಅಮೆರಿಕ ರಾಯಭಾರಿ ಕಚೇರಿ ತೆರೆಯಲು ಮನವಿ

11:25 PM Jul 17, 2019 | Lakshmi GovindaRaj |

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ತೆರೆಯುವಂತೆ ಕೋರಿ ಸಂಸದೆ ಶೋಭಾ ಕರಂದ್ಲಾಜೆಯವರು ಬುಧವಾರ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

Advertisement

ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಅಮೆರಿಕ ರಾಯಭಾರಿ ಕಚೇರಿ ಇಲ್ಲ. ಇದರಿಂದ ಇಲ್ಲಿನ ಜನರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅಮೆರಿಕ ರಾಯಭಾರಿ ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆಯುವಂತೆ ಕೋರಿ ಬಿಜೆಪಿ ರಾಜ್ಯ ಸಹ ವಕ್ತಾರ ಎ.ಎಚ್‌.ಆನಂದ್‌, ಎ.ಎನ್‌.ವೇಣುಗೋಪಾಲ್‌, ರಂಜಿತ್‌ ಕುಮಾರ್‌ ಮೊದಲಾದವರು ಪತ್ರ ಬರೆದಿದ್ದರು. ಅಮೆರಿಕಕ್ಕೆ ವೀಸಾ ಸೇರಿದಂತೆ ರಾಯಭಾರಿ ಕಚೇರಿಯ ಕೆಲಸಕ್ಕೆ ಚೆನ್ನೈಗೆ ಅಲೆದಾಡಬೇಕಾದ ಸ್ಥಿತಿ ಇದೆ.

ಹೀಗಾಗಿ, ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ತೆರೆಯುವಂತೆ ಪತ್ರದಲ್ಲಿ ಕೋರಿದ್ದರು. ಈ ಪತ್ರದಂತೆ ಸಂಸದೆ ಶೋಭಾ ಕರಂದ್ಲಾಜೆಯವರು ಕರ್ನಾಟಕದ ಜನರ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ತೆರೆಯುವಂತೆ ಕೋರಿ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next