Advertisement

ಸೌಲಭ್ಯ ಕಲ್ಪಿಸಲು ಆಗ್ರಹ

03:00 PM Nov 17, 2019 | Suhan S |

ಮದ್ದೂರು: ಕುಡಿವ ನೀರು, ಶೌಚಾಲಯ, ಆಸನದ  ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ತಾಲೂಕು ಕಚೇರಿಗೆ ಅಗತ್ಯ ಕ್ರಮವಹಿಸುವಂತೆ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹನುಮೇಶ್‌ ತಹಶೀಲ್ದಾರ್‌ ನಾಗೇಶ್‌ ಒತ್ತಾಯಿಸಿದರು.

Advertisement

ಪಟ್ಟಣದ ತಾಲೂಕು ಕಚೇರಿ ಒಳಾಂಗಣದಲ್ಲಿ ಅಶುಚಿತ್ವ ತಾಂಡವವಾಡುವ ಜತೆಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸದೆ ನಿರ್ಲಕ್ಷ್ಯ ವಹಿಸಿದ್ದು, ಇದರಿಂದಾಗಿ ಕಚೇರಿಗೆ ಆಗಮಿಸುವಸಾರ್ವಜನಿಕರು, ಮಹಿಳೆಯರು ಹಾಗೂ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ತೊಂದರೆ ಉಂಟಾಗಿದೆ ಎಂದು ದೂರಿದರು.

ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಕಾರಣ ಸದಾ ಜನ ಸಂದಣಿಯಿಂದ ಕೂಡಿದ್ದು ಸಮರ್ಪಕವಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿಕಲಚೇತನರ ವ್ಹೀಲ್‌ಚೇರ್‌ ಇಲ್ಲದೆ ಪರದಾಡುವಂತಾಗಿದೆ. ತಹಶೀಲ್ದಾರ್‌ ಅವರಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕೊಠಡಿಗಳಲ್ಲಿ ಅಶುಚಿತ್ವದ ಜತೆಗೆ ಕೆಲ ಕೊಠಡಿಗಳು ಶಿಥಿಲಗೊಂಡಿದ್ದು ತಾಲೂಕು ಕಚೇರಿಗೆ ಸುಣ್ಣ, ಬಣ್ಣ ಬಳಿದು ಹಲವು ವರ್ಷಗಳೇ ಕಳೆದಿದ್ದರೂ ದುರಸ್ತಿಗೊಳಿಸುವ ಕೆಲಸಕ್ಕೆ ಸ್ಥಳೀಯ ಶಾಸಕರು ಮುಂದಾಗದಿರುವುದು ವಿಪರ್ಯಾಸ ಎಂದು ದೂರಿದರು.

ವೃದ್ಧಾಪ್ಯ, ವಿಕಲಚೇತನ ವೇತನ, ವಿಧವಾ ವೇತನಸೇರಿದಂತೆ ಇನ್ನಿತರೆ ಸರ್ಕಾರಿ ಯೋಜನೆಗಳನ್ನು ಪಡೆಯಲು ಫ‌ಲಾನುಭವಿಗಳು ಪ್ರತಿನಿತ್ಯ ಪರದಾಡುತ್ತಿದ್ದು, ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಕಾರಣ ಎಲ್ಲೆಡೆ ಭ್ರಷ್ಟಾಚಾರ,ಲಂಚಗುಳಿತನ ಮಿತಿ ಮೀರಿದ್ದು ಸರ್ಕಾರ ಕೂಡಲೇ ಕಾಯಂ ತಹಶೀಲ್ದಾರ್‌ ಅವರನ್ನು ನೇಮಕ ಮಾಡುವಮೂಲಕ ಅರ್ಜಿಗಳನ್ನು ವಿಲೇವಾರಿ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದರು.

ಬಳಿಕ ಮಾತನಾಡಿದ ಪ್ರಭಾರ ತಹಶೀಲ್ದಾರ್‌ ನಾಗೇಶ್‌ ತಾಲೂಕು ಕಚೇರಿ ಶುಚಿತ್ವಕ್ಕೆ ಈಗಾಗಲೇ ಸಿಬ್ಬಂದಿಗಳಿಗೆ ಸೂಚಿಸಿದ್ದು ಕುಡಿಯುವ ನೀರು, ಶೌಚಾಲಯ ನಿರ್ವಹಣೆಗೆ ಅಗತ್ಯ ಕ್ರಮವಹಿಸುವಜತೆಗೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಮಾರೋಪಾದಿಯಲ್ಲಿ ಕ್ರಮಕೈಗೊಳ್ಳಲು ಸರ್ಕಾರ ಕಾಯಂ ತಹಶೀಲ್ದಾರ್‌ ಅವರನ್ನು ನಿಯೋಜನೆ ಮಾಡಿದ್ದಲ್ಲಿ ಹಲವಾರು ಸಮಸ್ಯೆಗಳು ಪರಿಹಾರ ಕಾಣಲಿರುವುದಾಗಿ ತಿಳಿಸಿದರು. ಶಿರಸ್ತೇದಾರ್‌ ರೂಪ, ನವೀನ್‌, ಮುಖಂಡರಾದ ಸ್ವಾಮಿ, ಕೃಷ್ಣಪ್ಪ, ಶಿವಣ್ಣ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next