Advertisement
ಬೆಂಗಳೂರಿನಲ್ಲಿ ಶನಿವಾರ ಸಚಿವರನ್ನು ಭೇಟಿ ಮಾಡಿದ ಅವರು, ಬೆಳಗಾವಿಯಲ್ಲಿ ಐಟಿ-ಪಾರ್ಕ್ ಸ್ಥಾಪಿಸುವ ಸಂಬಂಧ ತಮ್ಮ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ಆಯೋಜಿಸುವಂತೆ ಮನವಿ ಮಾಡಿದರು. ಬೆಳಗಾವಿಯು ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಇಲ್ಲಿ ಉತ್ತಮ ರೈಲ್ವೆ ಹಾಗೂ ವಿಮಾನ ಸೇವೆ ಲಭ್ಯವಿದೆ. ಸಂಪನ್ಮೂಲಗಳು ಸಹ ಸಮೃದ್ಧಿಯಾಗಿವೆ. ಹೀಗಿರುವಾಗ ಐಟಿ ಪಾರ್ಕ್ ಸ್ಥಾಪನೆ ಮಾಡಿದರೆ ಈ ಭಾಗದ ಅಭಿವೃದ್ಧಿಯ ಜೊತೆಗೆ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ದೊರೆಯಲಿದೆ ಎಂದು ಹೇಳಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಾಹಿತಿ ತಂತ್ರಜ್ಞಾನ ಸಚಿವರು ಆದಷ್ಟು ಬೇಗ ಬೆಂಗಳೂರಿನಲ್ಲಿ ಸಭೆ ನಡೆಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅಭಯ ಪಾಟೀಲ ತಿಳಿಸಿದ್ದಾರೆ. Advertisement
ಐಟಿ ಪಾರ್ಕ್ ಸ್ಥಾಪನೆಗೆ ಮನವಿ
12:03 PM Oct 13, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.