Advertisement

ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಆಗ್ರಹಿಸಿ ಮನವಿ

12:18 PM Feb 07, 2020 | Suhan S |

ಬಾದಾಮಿ: ಜಿಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಬಜೆಟ್‌ನಲ್ಲಿ ಅವಶ್ಯಕ ಅನುದಾನ ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

Advertisement

ಮಂಜೂರಾಗಿರುವ ವೈದ್ಯಕೀಯ ಕಾಲೇಜು ಕಾರ್ಯಾರಂಭ ಮಾಡದೇ ನಿರ್ಲಕ್ಷ್ಯದೋರಣೆ ಅನುಸರಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಮಂಜೂರಾಗಿದ್ದ ವೈದ್ಯಕಿಯ ಕಾಲೇಜಿಗೆ ಅನುದಾನ ದೊರಕಿಲ್ಲ. ಈ ಸರ್ಕಾರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಕರವೇ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಡಿ.ಡಿ. ನದಾಫ, ಸಂಘಟನಾ ಕಾರ್ಯದರ್ಶಿ ಶಿವಾನಂದ ಲೆಂಕೆನ್ನವರ, ಉಪಾಧ್ಯಕ್ಷ ಪರಶುರಾಮ ನೀಲಗುಂದ, ಪುಂಡಲೀಕ ಮುಷ್ಠಿಗೇರಿ, ತಿಮ್ಮಣ್ಣ ಹಳಗೇರಿ. ಹೂವಪ್ಪ ತಳವಾರ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next