Advertisement
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧ್ರುವನಾರಾಯಣ, ಕುಂತೂರು, ಅಳಗಂಚಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಲ್ಲಿ ಪ್ರಾರಂಭಿಸಿ ಸುಮಾರು 14-15 ತಿಂಗಳಾದರೂ ಕಬ್ಬನ್ನು ಕಟಾವು ಮಾಡದೆ ಸಂಕಷ್ಟದಲ್ಲಿರುವ ಕಬ್ಬು ಬೆಳೆಗಾರರು ಕಬ್ಬನ್ನು ಕಟಾವು ಮಾಡಲು ಅವಕಾಶ ನೀಡಬೇಕು. ಲಾಕ್‌ಡೌನ್‌ನಿಂದ ಮನೆಯಲ್ಲೇ ಇರುವ ಕೂಲಿ ಕಾರ್ಮಿಕರಿಗೆ ನರೇಗಾಯೋಜನೆಯಡಿ ನಿರುದ್ಯೋಗ ಭತ್ಯೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಪಿಂಚಿಣಿದಾರ ರಿಗೆ, ಅಸಂಘಟಿತ ವಲಯದಲ್ಲಿರುವವರಿಗೆ ಮತ್ತು ಜನ್‌ಧನ್ ಖಾತೆ ಹೊಂದಿರುವ ಎಲ್ಲಾ ಬಡವರ ಖಾತೆಗೆ 5 ಸಾವಿರ ರೂ. ಹಾಕಬೇಕು. ಸೆಸ್ಕ್ನಿಂದ ಮನೆ ಮನೆಗೆ ತೆರಳಿ ವಿದ್ಯುತ್ ಬಿಲ್ ವಸೂಲಿಯನ್ನು ತಕ್ಷಣವೇ ನಿಲ್ಲಿಸಬೇಕು. ಶ್ರಮಿಕ ವರ್ಗಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದರು. ಶಾಸಕ ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಪಂ ಪ್ರಭಾರ ಅಧ್ಯಕ್ಷ ಮಹೇಶ್, ಮಾಜಿ ಶಾಸಕರಾದ ಕೃಷ್ಣಮೂರ್ತಿ, ಬಾಲ ರಾಜ್, ಜಿಪಂ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ರವಿಕುಮಾರ್, ವಕೀಲ ಅರುಣ್‌ಕುಮಾರ್ ಇತರರಿದ್ದರು.