Advertisement

ಅಕ್ರಮ ಗಣಿಗಾರಿಕೆ ತಡೆಗೆ ಒತ್ತಾಯ

03:56 PM Nov 22, 2019 | Suhan S |

ಶ್ರೀರಂಗಪಟ್ಟಣ: ತಾಲೂಕಿನ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಯನ್ನು ತಡೆಯಬೇಕು ಎಂದು ರೈತ ಸಂಘ, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದರು.

Advertisement

ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ರೂಪಾ ಅವರನ್ನು ಭೇಟಿ ಮಾಡಿದ ರೈತಸಂಘ (ಮೂಲ ಸಂಘಟನೆ), ದಲಿತ ಸಂಘರ್ಷ ಸಮಿತಿಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸರ್ಕಾರಿ ಗೋಮಾಳ, ಅರಣ್ಯ ಭೂಮಿ ಮತ್ತು ಹುಲ್ಲು ಬನಿಗೆ ಮೀಸಲಾದ ಜಾಗದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಪರಿಸರ ಹಾಳಾಗುತ್ತಿದೆ. ಸರ್ಕಾರದ ಸಂಪತ್ತು ಲೂಟಿಯಾಗುತ್ತಿದೆ. ಅನಧಿಕೃತವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ತಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜೇಶ್‌ಗೌಡ ಆಗ್ರಹಿಸಿದರು.

ಆಧಾರ್‌ ತಿದ್ದುಪಡಿಗೆ ಸಮಸ್ಯೆ: ಆಧಾರ್‌ ಕಾರ್ಡ್‌ ಮಾಡುವ ಕೇಂದ್ರ ಸ್ಥಗಿತಗೊಂಡಿದ್ದು, ಮತ್ತೆ ತೆರೆಯಬೇಕು. ಪಹಣಿ ತಿದ್ದುಪಡಿ ಹಾಗೂ ಪೌತಿ ಖಾತೆ ಕೆಲಸಗಳು ಶೀಘ್ರ ಆಗಬೇಕು. ಭತ್ತ ಖರೀದಿ ಕೇಂದ್ರ ತೆರೆಯಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಹ ಶೀಲ್ದಾರ್‌ ರೂಪಾ ಅವರಿಗೆ ಮನವಿ ಸಲ್ಲಿಸಿದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಗಂಜಾಂ ರವಿಚಂದ್ರ, ಕುಬೇರಪ್ಪ, ರೈತ ಸಂಘ ತಾಲೂಕು ಘಟಕದ ಅಧ್ಯಕ್ಷ ಶ್ರೀಕಂಠಯ್ಯ, ಜಿಲ್ಲಾ ಘಟಕದ ಉಪಾಧ್ಯಕ್ಷ ನಾಗೇಂದ್ರಸ್ವಾಮಿ, ಮೋಹನ್‌, ಶ್ರೀಕಂಠು, ಚಂದ್ರಶೇಖರ್‌, ಸಿದ್ದೇಗೌಡ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next