Advertisement

ಪರ್ಯಾಯ ಮಾರ್ಗ ಬಳಸಲು ಮನವಿ

12:13 PM Aug 10, 2018 | Team Udayavani |

ಬೆಂಗಳೂರು: ಎಚ್‌ಎಎಲ್‌ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿವಾರಣೆಗಾಗಿ ಹಳೆ ವಿಮಾನ ನಿಲ್ದಾಣ ರಸ್ತೆಯ ವಿಂಡ್‌ ಟನಲ್‌ ರಸ್ತೆ ಜಂಕ್ಷನ್‌ನಲ್ಲಿ ಪಾಲಿಕೆ ಕೆಳ ಸೇತುವೆ ಕಾಮಗಾರಿ ಪ್ರಾರಂಭಿಸಲು ಮುಂದಾಗಿದ್ದು, ಕಾಮಗಾರಿ ಪೂರ್ಣಗೊಳ್ಳುವವರೆಗೆ ಪರ್ಯಾಯ ರಸ್ತೆ ಬಳಸುವಂತೆ ಮನವಿ ಮಾಡಿದೆ.

Advertisement

ಎಚ್‌ಎಎಲ್‌ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುವುದರಿಂದ ರಸ್ತೆಯನ್ನು ಸಿಗ್ನಲ್‌ ಫ್ರೀ ಕಾರಿಡಾರ್‌ ಮಾಡಲು ಪಾಲಿಕೆ ಯೋಜನೆ ರೂಪಿಸಿದೆ. ಅದರಂತೆ ಯೋಜನೆಗಾಗಿ ಜಾಗ ನೀಡಲು ಎಚ್‌ಎಎಲ್‌ ಸಂಸ್ಥೆ ಒಪ್ಪಿದ್ದು, ಶೀಘ್ರ ಕಾಮಗಾರಿ ಆರಂಭಿಸಲು ಪಾಲಿಕೆ ಸಿದ್ಧತೆ ನಡೆಸಿದೆ.

ವೆಲ್ಲಾರ ಜಂಕ್ಷನ್‌ನಿಂದ ಹೋಪ್‌ ಫಾರಂವರೆಗೆ ಸಿಗ್ನಲ್‌ ಫ್ರೀ ಕಾರಿಡಾರ್‌ ನಿರ್ಮಾಣ ಮಾಡುವ ಕಾಮಗಾರಿಗಾಗಿ 31 ಸಾವಿರ ಚದರ ಅಡಿ ಜಾಗವನ್ನು ಎಚ್‌ಎಎಲ್‌ ಸಂಸ್ಥೆ ಬಿಬಿಎಂಪಿಗೆ ಹಸ್ತಾಂತರ ಮಾಡಿದೆ. ಅದರಂತೆ ವಿಂಡ್‌ ಟನಲ್‌ ರಸ್ತೆ ಜಂಕ್ಷನ್‌ನಲ್ಲಿ ಕೆಳಸೇತುವೆ ನಿರ್ಮಾಣವಾಗಲಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಜಾಗವನ್ನು ಎಚ್‌ಎಎಲ್‌ಗೆ ಪಾಲಿಕೆ ಹಿಂತಿರುಗಿಸಲಿದೆ.

ಮುಖ್ಯಮಂತ್ರಿ ನಗರೋತ್ಥಾನದಿಂದ 55 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಆರು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಪಾಲಿಕೆಯ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಸಾರ್ವಜನಿಕರನ್ನು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next