Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆಗೆ ಸೂಚನೆ

07:16 PM Jul 01, 2021 | Team Udayavani |

ಯಾದಗಿರಿ: ಜಿಲ್ಲೆಯಾದ್ಯಂತ ಜು. 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿದ ಪರೀಕ್ಷಾ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್‌ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಹೊರಡಿಸಲಾದ ನಿರ್ದೇಶನದಂತೆ ಪರೀಕ್ಷೆ ನಡೆಸಲು ಅಣಿಯಾಗುವಂತೆ ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 231 ಪ್ರೌಢಶಾಲೆಗಳಿವೆ. ಸರ್ಕಾರಿ ಪ್ರೌಢಶಾಲೆ, ಅನುದಾನಿತ ಪ್ರೌಢಶಾಲೆ, ಸರ್ಕಾರಿ/ ಖಾಸಗಿ ವಸತಿ ಪ್ರೌಢಶಾಲೆಯ ಒಟ್ಟು 17,749 ಮಕ್ಕಳು ಪರೀಕ್ಷೆಗೆ ನೋಂದಣಿ  ಮಾಡಿಕೊಂಡಿರುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಾಂತಗೌಡ ಪಾಟೀಲ್‌
ಸಭೆಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಒಟ್ಟು 92 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಪ್ರತಿ ಕೇಂದ್ರಕ್ಕೆ ಮುಖ್ಯಸ್ಥರನ್ನು ನೇಮಕ ಮಾಡಲಾಗಿದೆ. 1,480 ಪರೀûಾ ಕೋಣೆಗಳನ್ನು ಸಿದ್ಧತೆ ಮಾಡಿಕೊಂಡಿದ್ದು, ಕೋವಿಡ್‌ ಹಿನ್ನೆಲೆ ಕೇವಲ 12 ವಿದ್ಯಾರ್ಥಿಗಳಿಗೆ ಒಂದು ಕೋಣೆ ವ್ಯವಸ್ಥೆ ಮಾಡಿ
ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯ ಮೂರು ತಾಲೂಕಿನಲ್ಲಿ ಕೋವಿಡ್‌ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೇಂದ್ರಗಳನ್ನು ಗುರುತಿಸಿ ಆಯಾ ತಾಲೂಕು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಕೌಂಟರ್‌ ಪರೀಕ್ಷಾ ಕೇಂದ್ರದ ಮುಖ್ಯ
ದ್ವಾರದಲ್ಲಿ ಸ್ಥಾಪಿಸಲು ಸೂಚಿಸಿದರು.

ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಪರೀಕ್ಷಾ ಮಕ್ಕಳಿಗಾಗಿ ಮೀಸಲಿಡಬೇಕು. ಪರೀಕ್ಷಾ ಸಮಯದಲ್ಲಿ ಕೇಂದ್ರಗಳಿಗೆ ಥರ್ಮಲ್‌ ಸ್ಕಾನರ್‌ಗಳನ್ನು ಬಳಸಬೇಕು. ಪ್ರತಿ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸರ್‌ ಮಾಡಿ ಸ್ವಚ್ಛಗೊಳಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾ ಧಿಕಾರಿ ಶಂಕರಗೌಡ ಸೋಮನಾಳ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕಿನ ಪರೀಕ್ಷಾ ನೊಡಲ್‌ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next