Advertisement
ನಗರ ಪೊಲೀಸ್ ಠಾಣೆಯಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಿಬಂದಿಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.
ರಾತ್ರಿ ಪೊಲೀಸ್ ಸಿಬಂದಿಗಳು ಗಸ್ತು ತಿರುಗುತ್ತಿಲ್ಲ. ಮಾದಕ ವ್ಯಸನಿಗಳು ಸಾರ್ವಜನಿಕರಿಗೆ ಕಿರಿಕಿರಿಯನ್ನುಂಟು ಮಾಡು ತ್ತಿದ್ದು, ಕೆಲವು ಬಡಾವಣೆಗಳಲ್ಲಿ ಪೋಲಿ-ಪುಂಡರ ಹಾವಳಿ ಹೆಚ್ಚಾಗಿದೆ. ಸಂಶಯಾಸ್ಪದವಾಗಿ ನಡೆದುಕೊಳ್ಳುವ ಮತ್ತು ಸಮಾಜದಲ್ಲಿ ಆತಂಕವನ್ನು ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕೆಲವು ಆಟೋ ಚಾಲಕರು ನಿಯಮ ಉಲ್ಲಂ ಸುತ್ತಿದ್ದು, ಪೊಲೀಸರು ಇವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಡಿ.ಎಚ್. ಮೇದಪ್ಪ ಆಗ್ರಹಿಸಿದರು.
Related Articles
Advertisement
ಈ ಸಂದರ್ಭ ಮಾತನಾಡಿದ ಪೊಲೀಸ್ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯ ನಿಷ್ಠೆಯ ಬಗ್ಗೆ ಸಮರ್ಥಿಸಿಕೊಂಡರು. ಎಲ್ಲಾ ಬಡವಾಣೆಗಳಲ್ಲಿ, ಪ್ರತಿಯೊಂದು ಸಂದರ್ಭಗಳಲ್ಲೂ ಪೊಲೀಸರು ಹಾಜರಿರಲು ಸಾಧ್ಯವಿಲ್ಲ. ಸಂಶಯಾಸ್ಪದ ಪ್ರಕರಣಗಳು ನಡೆದರೆ, ಯಾರಾದರು ಸಮಾಜ ಘಾತುಕ ಕೃತ್ಯದಲ್ಲಿ ತೊಡಗಿದ್ದರೆ ಅಥವಾ ಗಾಂಜಾ ಮಾರಾಟ ವಾಗುತ್ತಿದ್ದರೆ ತತ್‌ಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದರು. ಕಾನೂನು, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವೆಂದರು.ಹಿರಿಯ ಪತ್ರಕರ್ತರಾದ ಜಿ. ಚಿದ್ವಿಲಾಸ್, ಶ್ರೀಧರ್ ನೆಲ್ಲಿತ್ತಾಯ ಸೇರಿದಂತೆ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ನಗರದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ಮನವಿ ಮಾಡಿದರು.