Advertisement

Kasaragod ಸಮುದ್ರದಲ್ಲಿ ಅಲೆಗಳ ಸೆಳೆತಕ್ಕೆ ಒಳಗಾದ 20 ಮಕ್ಕಳ ರಕ್ಷಣೆ

10:59 PM Dec 04, 2023 | Team Udayavani |

ಕಾಸರಗೋಡು: ಕಾಸರಗೋಡು ಕಡಪ್ಪುರದಲ್ಲಿ ಸ್ನಾನಕ್ಕಿಳಿದ ಇಪ್ಪತ್ತರಷ್ಟು ಮಕ್ಕಳು ಭಾರೀ ಅಲೆಗೆ ಸಿಲುಕಿ ಆಳ ಸಮುದ್ರಕ್ಕೆ ಒಯ್ಯಲ್ಪಟ್ಟಿದ್ದು, ವಿಷಯ ತಿಳಿದು ಮೀನು ಕಾರ್ಮಿಕರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮಕ್ಕಳನ್ನು ಅಪಾಯದಿಂದ ರಕ್ಷಿಸಲಾಗಿದೆ.

Advertisement

ಸೋಮವಾರ ಬೆಳಗ್ಗೆ ಕಾಸರಗೋಡು ಕಡಪ್ಪುರದ ಬಳಿ ಅಯ್ಯಪ್ಪ ದೀಪೋತ್ಸವ ಕ್ಕೆಂದು ಬಂದ 12, 13 ಮತ್ತು 14 ರ ಹರೆಯದ ಸುಮಾರು 20ರಷ್ಟು ಮಕ್ಕಳು ಸಮುದ್ರ ಕಿನಾರೆಗೆ ಬಂದು ಮೀನು ಕಾರ್ಮಿಕರು ಬಳಸುವ ಕ್ಯಾನ್‌ಗಳನ್ನು ದೇಹಕ್ಕೆ ಕಟ್ಟಿಕೊಂಡು ಸಮುದ್ರಕ್ಕಿಳಿದಿದ್ದರು. ಆದರೆ ಅದೇ ಹೊತ್ತಿನಲ್ಲಿ ಅಪ್ಪಳಿಸಿದ ಅಲೆ ಮಕ್ಕಳನ್ನು ಎಳೆದೊಯ್ದಿದೆ.

ಮಕ್ಕಳು ಸಮುದ್ರದಲ್ಲಿ ಮುಳುಗುತ್ತಿ ರುವುದನ್ನು ಕಂಡ ಮೀನು ಕಾರ್ಮಿಕ ರಾದ ಬಾಬು, ಪುಷ್ಪಾಕರನ್‌, ಚಿತ್ರಕಾರನ್‌, ಹರೀಶ್‌ ತತ್‌ಕ್ಷಣ ಸಮುದ್ರಕ್ಕೆ ಹಾರಿ ಹರಸಾಹಸದಿಂದ ಮಕ್ಕಳನ್ನು ದಡಕ್ಕೆ ತಲುಪಿಸುವಲ್ಲಿ ಯಶಸ್ವಿಯಾದರು.

ಇದರಿಂದ ಸಂಭವನೀಯ ದುರಂತ ತಪ್ಪಿತು. ವಿಷಯ ತಿಳಿದು ಪೊಲೀಸ್‌ ಹಾಗೂ ಅಗ್ನಿಶಾಮಕ ದಳ ಮತ್ತುು ಸ್ಥಳೀಯರು ಸಮುದ್ರ ಕಿನಾರೆಗೆ ತಲುಪಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next