Advertisement

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

09:00 PM Jan 01, 2025 | Team Udayavani |

ರಾಜಸ್ಥಾನ: ಕಳೆದ ಸೋಮವಾರ(ಡಿ.23) ರಾಜಸ್ಥಾನದ ಕೊಟ್‌ಪುಟ್ಲಿಯಲ್ಲಿ ತಂದೆಯ ಜೊತೆ ತೋಟಕ್ಕೆ ಹೋಗಿದ್ದ ವೇಳೆ 150 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಮೂರೂ ವರ್ಷದ ಬಾಲಕಿ ಚೇತನಾ ಕೊನೆಗೂ ಬದುಕಿ ಉಳಿಯಲಿಲ್ಲ.

Advertisement

ಕಳೆದ ಹತ್ತು ದಿನಗಳಿಂದ ರಕ್ಷಣಾ ತಂಡ ಕೊಳವೆ ಬಾವಿಗೆ ಬಿದ್ದ ಬಾಲಕಿಯ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಹತ್ತನೇ ದಿನವಾದ ಇಂದು ಬಾಲಕಿಯನ್ನು ಕೊಳವೆ ಬಾವಿಯಿಂದ ಮೇಲಕ್ಕೆ ತೆಗೆದು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಈ ವೇಳೆ ಪರಿಶೀಲಿಸಿದ ವೈದ್ಯರು ಬಾಲಕಿ ಮೃತ ಪಟ್ಟಿರುವುದಾಗಿ ಹೇಳಿದ್ದಾರೆ.

ಮೂರೂ ವರ್ಷದ ಬಾಲಕಿ ಚೇತನಾ ಕಳೆದ ಸೋಮವಾರ(ಡಿ.23) ತನ್ನ ತಂದೆಯ ಜೊತೆಯಲ್ಲಿ ಜಮೀನಿಗೆ ಹೋಗಿದ್ದ ವೇಳೆ ಆಟವಾಡುತ್ತಿರುವ ವೇಳೆ ಸುಮಾರು 700 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಾಳೆ, ಬಾಲಕಿ ಕೊಳವೆ ಬಾವಿಗೆ ಬಿದ್ದಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಬಾಲಕಿಯ ರಕ್ಷಣಾ ಕಾರ್ಯಾಚರಣೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ, ಸ್ಥಳಕ್ಕೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸೇರಿದಂತೆ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ದೌಡಾಯಿಸಿ ಕಳೆದ ಹತ್ತು ದಿನಗಳಿಂದ ಬಾಲಕಿಯನ್ನು ಸುರಕ್ಷಿತವಾಗಿ ಹೊರತರಲು ಅವಿರತ ಶ್ರಮ ನಡೆಸಿದೆ. ಅಲ್ಲದೆ ಬಾಲಕಿಯ ಪೋಷಕರು, ಗ್ರಾಮಸ್ಥರು ಸೇರಿದಂತೆ ಹಲವು ಮಂದಿ ಬಾಲಕಿ ಬದುಕಿ ಬರಲಿ ಎಂದು ದೇವರಲ್ಲಿ ವಿಶೇಷ ಪೂಜೆಯನ್ನು ನಡೆಸಿದ್ದರು ಆದರೆ ಕೊನೆಗೂ ಪೋಷಕರ, ಗ್ರಾಮಸ್ಥರ ಮೊರೆ ಮಾತ್ರ ದೇವರಿಗೆ ಕೇಳಿಸಲಿಲ್ಲ.

ಆಸ್ಪತ್ರೆ ಬಳಿ ಇದ್ದ ಪೋಷಕರಿಗೆ ಮಗು ಬದುಕುಳಿಯಲಿಲ್ಲ ಎಂಬ ವಿಚಾರ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

Advertisement
Advertisement

Udayavani is now on Telegram. Click here to join our channel and stay updated with the latest news.

Next