Advertisement

ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಸಂಶೋಧನೆ ಅಗತ್ಯ

09:40 PM May 17, 2019 | Team Udayavani |

ಚಿಕ್ಕಬಳ್ಳಾಪುರ: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯಿಂದ ಜಾಗತಿಕ ಮಟ್ಟದಲ್ಲಿ ಅನೇಕ ರಂಗಳಲ್ಲಿ ಕ್ಷಿಪ್ರಗತಿಯಲ್ಲಿ ಬದಲಾವಣೆ ಕಾಣುತ್ತಿದ್ದು, ಸಮಾಜದಲ್ಲಿ ಕ್ಲಿಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸಂಶೋಧನಾ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕಿದೆ ಎಂದು ಬೆಂಗಳೂರಿನ ಟಾಟಾ ಕನ್ಸಲ್‌ಟೆನ್ಸಿ ಗೋಬಲ್‌ ಹೆಡ್‌ ಇ.ಎಸ್‌.ಚಕ್ರವರ್ತಿ ತಿಳಿಸಿದರು.

Advertisement

ನಗರದ ಹೊರ ವಲಯದ ಚಂದ್ರಶೇಖರನಾಥ ಸ್ವಾಮೀಜಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಸೆಮಿನಾರ್‌ ಹಾಲ್‌ನಲ್ಲಿ ಶುಕ್ರವಾರ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತಾಗಿ ಆರಂಭಗೊಂಡ ಎರಡು ದಿನಗಳ ಅಂತಾರಾಷ್ಟ್ರೀಯ ಎರಡನೇ ಸಮ್ಮೇಳನದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಉತ್ತಮ ಸಂವಹನದ ಸಹಾಯದಿಂದ ದೇಶ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಪ್ರಗತಿ ಸಾಧಿಸಲು ಸಾಧಿಸಲು ಸಹಾಯವಾಗಿದೆ. ವಿಜ್ಞಾನ ಹಾಗೂ ತಂತ್ರಜ್ಞಾನ ಅಭಿವೃದ್ಧಿ ಹೆಚ್ಚಾದಂತೆ ಪ್ರತಿಯೊಬ್ಬರು ಜೀವನ ಶೈಲಿ ಕೂಡ ಬದಲಾಗುತ್ತದೆ. ಜೀವನ ಮಟ್ಟ ಕೂಡ ಸುಧಾರಣೆಗೊಳ್ಳುತ್ತದೆ ಎಂದರು.

ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರ ತೆಗೆಯುವ ದಿಸೆಯಲ್ಲಿ ಉಪನ್ಯಾಸಕರು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ ಹೊರ ಬರಲು ಸಾಧ್ಯವಾಗುತ್ತದೆ ಎಂದರು.

ಉಪನ್ಯಾಸ: ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನ್ಯಾಷನಲ್‌ ಏರೋಸ್ಟೇಸ್‌ ಲ್ಯಾಬೋರೇಟರಿ ನಿರ್ದೇಶಕ ಡಾ.ಬಿ.ಬಾಲ್ಯಸುಬ್ರಹ್ಮಣ್ಯಂ ಮಾತನಾಡಿ, ಇಂದಿನ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿನ ಸಮಸ್ಯೆ, ಸವಾಲುಗಳು, ಬಾಹ್ಯಕಾಶ ಕ್ಷೇತ್ರದಲ್ಲಿರುವ ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

Advertisement

ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಕ್ರಿಯಾಶೀಲ ಚಟುವಟಿಕೆಗಳಿಂದ ಸಜ್ಜುಗೊಳಿಸಿದಾಗ ಮಾತ್ರ ದೇಶ ಉತ್ತಮ ಪ್ರಗತಿ ಸಾಧಿಸಲು ಸಾಧ್ಯ ಎಂದರು.

ಬಿಜಿಎಸ್‌ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಮುನಿಕೆಂಚೇಗೌಡ, ಬಿಜಿಎಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ.ಎನ್‌.ಶಿವರಾಮರೆಡ್ಡಿ, ಎಸ್‌ಜೆಸಿಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎಂ.ರವಿಕುಮಾರ್‌ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ದೇಶದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಸಮ್ಮೇಳನದ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಮ್ಮೇಳನಕ್ಕೆ 132 ಸಂಶೋಧನಾ ಪತ್ರಿಕೆಗಳು ಆಯ್ಕೆ: ಚಿಕ್ಕಬಳ್ಳಾಪುರದ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಆರಂಭಗೊಂಡಿರುವ ಎರಡು ದಿನಗಳ ಜಾಗತಿಕ ಎರಡನೇ ಸಮ್ಮೇಳನದಲ್ಲಿ ಸುಮಾರು 132 ಕ್ಕೂ ಹೆಚ್ಚು ತಾಂತ್ರಿಕ ನಿಯತಕಾಲಿಕೆ ಪೇಪರ್‌ಗಳು ಆಯ್ಕೆಗೊಂಡಿವೆ.

ಆ ಪೈಕಿ ತಾಂತ್ರಿಕ ವಿಭಾಗ ಹಾಗೂ ಏರೋಸ್ಟೇಸ್‌ ವಿಭಾಗದಿಂದ 27, ಯಾಂತ್ರಿಕ ವಿಭಾಗದಿಂದ 17, ಗಣಕಯಂತ್ರ ಹಾಗೂ ಮಾಹಿತಿ ತಂತ್ರಜ್ಞಾನದಿಂದ 48, ವಿದ್ಯುನ್ಮಾನ ವಿಭಾಗ ಹಾಗೂ ದೂರ ಸಂಪರ್ಕ ವಿಭಾಗದಿಂದ 40 ಪೇಪರ್‌ಗಳು ಸೇರಿ ಒಟ್ಟು 132ಕ್ಕೂ ಅಧಿಕ ಸಂಶೋಧನಾ ಪತ್ರಿಕೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುಜಿಸಿ ಮತ್ತು ಸ್ಕೂಪಸ್‌ ಜರ್ನಲ್‌ನಲ್ಲಿ ಪ್ರಕಟಗೊಂಡಿವೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎಂ.ರವಿಕುಮಾರ್‌ ತಿಳಿಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ದೇಶದ ಅಭಿವೃದ್ಧಿಯಲ್ಲಿ ಎರಡು ಕಣ್ಣುಗಳು ಇದ್ದಂತೆ. ಜಾಗತಿಕವಾಗಿ ಇಂದು ಭಾರತ ಹೆಚ್ಚು ಪ್ರಗತಿಯ ಪಥದಲ್ಲಿ ಸಾಗುತ್ತಿದೆ ಎಂದರೆ ಅದಕ್ಕೆ ಭಾರತ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧಿಸಿರುವ ಪ್ರಗತಿಯೇ ಕಾರಣ. ತಾಂತ್ರಿಕ ವಿದ್ಯಾರ್ಥಿಗಳು ಗ್ರಾಮೀಣ ರೈತಾಪಿ ಜನರ ಅಭಿವೃದ್ಧಿಗೆ ಪೂರಕವಾಗಿ ಹೆಚ್ಚು ಸಂಶೋಧನೆಗಳು ಮಾಡುವುದರಿಂದ ದೇಶದ ಭವಿಷ್ಯ ಇನ್ನಷ್ಟು ಉಜ್ವಲಗೊಳ್ಳುತ್ತದೆ.
-ಮಂಗಳಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠ

Advertisement

Udayavani is now on Telegram. Click here to join our channel and stay updated with the latest news.

Next