ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ರೋವ್ ಲ್ಯಾಬ್ಸ್ ಪ್ರೈ ಲಿಮಿಟೆಡ್ ಸಹಯೋಗದಲ್ಲಿ ಕಾಲೇಜಿನಲ್ಲಿ ಸಾಕಷ್ಟು ಸಂಶೋಧನಾ ಯೋಜನೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಹೆಚ್ಚುತ್ತಿರುವ ಇಂಧನ ಬೆಲೆಗಳು, ವಾಯುಮಾಲಿನ್ಯ ತಡೆ, ಇಂಧನ ಉಳಿತಾಯದ ಅಗತ್ಯದ ಹಿನ್ನೆಲೆಯಲ್ಲಿ ಸೌರಶಕ್ತಿ ಪರಿಹಾರವಾಗಿದೆ. ವಿದ್ಯುತ್ ಚಾಲಿತ, ಹೈಬ್ರಿಡ್ ವಾಹನಗಳಲ್ಲಿ ಸೌರಶಕ್ತಿ ಬಳಕೆ ಕಾರ್ಯ ಸಾಧ್ಯ. ಅದೇ ರೀತಿ ಕೊಳಚೆ ನೀರಿನಿಂದ ದ್ರವರೂಪದ ನ್ಯಾನೋ ಗೊಬ್ಬರ ತಯಾರಿಸುವ ನಿಟ್ಟಿನಲ್ಲಿ ತಮ್ಮ ಕಾಲೇಜು ವಿದ್ಯಾರ್ಥಿಗಳು ಬೋಧಕರ ಮಾರ್ಗದರ್ಶನದಲ್ಲಿ ಮುಂದಾಗಿದ್ದಾರೆ. ರಾಜ್ಯದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಲ್ಲೊಂದಾದ ಬಿಐಇಟಿಯಲ್ಲಿ ಸುಮಾರು 25 ಸಾವಿರ ವಿದ್ಯಾರ್ಥಿಗಳು ಓದಿದ್ದು 8ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಶ್ವದ ವಿವಿಧೆಡೆ ಪ್ರತಿಷ್ಠಿತ ಕಂಪನಿಗಳಲ್ಲಿ, ಸ್ವಂತ ಕಂಪನಿಗಳನ್ನು ಸ್ಥಾಪಿಸಿಕೊಂಡು
ಸಾಧನೆ ಮಾಡುತ್ತಿದ್ದಾರೆ ಎಂದರು.
ಪ್ರಾಧ್ಯಾಪಕಿ ಡಾ| ಆಶಾಲತಾ ಮಾತನಾಡಿ, ಮಾ. 14ರಂದು ಬೆಳಿಗ್ಗೆ 10:30ಕ್ಕೆ ಕಾಲೇಜಿನ ಎಸ್ಸೆಸ್ಸೆಂ ಸಾಂಸ್ಕೃತಿಕ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಮ್ಮಿಕೊಂಡಿದ್ದೇವೆ. ಡಾ| ಪ್ರಭಾ ಮಲ್ಲಿಕಾರ್ಜುನ, ಡಾ| ಟಿ.ಕೆ. ಅನುರಾಧ, ಡಾ| ಬಿ.ಇ. ರಂಗಸ್ವಾಮಿ
ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾಲೇಜು ನಿರ್ದೇಶಕ ಪ್ರೊ.ವೈ.ವೃಷಭೇಂದ್ರಪ್ಪ, ಪ್ರಾಚಾರ್ಯ ಡಾ.ಎಚ್.ಬಿ.ಅರವಿಂದ ಇತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.
Advertisement
ಕಾಲೇಜಿನ ಬೋಧಕ ಸಾರ್ವಜನಿಕ ಸಂಪರ್ಕ ಡೀನ್ ಡಾ| ಈ.ಪಿ. ದೇಸಾಯಿ, ಡಾ| ಶಂಕರಮೂರ್ತಿ, ಡಾ| ನಿರ್ಮಲ, ಡಾ| ಶರಣ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.