Advertisement

ವಸತಿ ರಹಿತರಿಗೆ ನಿವೇಶನ ಮಂಜೂರು

03:49 PM Jan 15, 2020 | Suhan S |

ಕೊಪ್ಪಳ: ಜಿಲ್ಲೆಯ ವಸತಿ ರಹಿತರಿಗೆ ವಾಜಪೇಯಿ ನಗರ ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್‌ ಹಾಗೂ ವಿವಿಧ ಯೋಜನೆಗಳಡಿ ನಿವೇಶ ಮಂಜೂರು ಮಾಡುವ ಕುರಿತಂತೆ ನಿಯಮಾನುಸಾರವಾಗಿ ಆಯ್ಕೆ ಪ್ರಕ್ರಿಯೆ ನಡೆಯಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌ ಸಂಬಂ ಧಿಸಿದ ಅಧಿ ಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಜಪೇಯಿ ನಗರ ನಿವೇಶನ ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್‌ ಯೋಜನೆಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಂಚಾಯತ್‌ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ವಸತಿ ರಹಿತರಿಗೆ ನಿವೇಶನ ಸೌಲಭ್ಯ ಒದಗಿಸಲು ಸಂಬಂ ಧಿಸಿದ ಪಂಚಾಯತ್‌ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಫಲಾನುಭವಿಗಳ ಅನುಗಣವಾಗಿ ಅವಶ್ಯವಿರುವ ಕಡೆ ಜಮೀನು ಖರೀದಿಸಬೇಕು. ಭೂ ಮಾಲೀಕರಿಂದ ಜಮೀನು ಖರೀದಿ ಪ್ರಕ್ರಿಯೆ ನಿಯಮಾನುಸಾರ ಅಂದರೆ ಜಮೀನಿನ ಪ್ರಸ್ತುತ ಮಾರುಕಟ್ಟೆಯ ಸರ್ಕಾರಿ ದರಕ್ಕೆ ಮೂರು ಪಟ್ಟು ಹೆಚ್ಚಿಸಿ ನಿಗದಿಪಡಿಸಬೇಕು. ಜಮೀನು ಎನ್‌.ಎ. ರೂಪದಲ್ಲಿದರೆ ಅದನ್ನು ಸಹ ಸರ್ಕಾರದ ನಿಮಗಳ ಪ್ರಕಾರವೇ ಖರೀದಿಸಬೇಕು.

ಜಿಲ್ಲೆಯ ಕೊಪ್ಪಳ ಹಾಗೂ ಗಂಗಾವತಿ ನಗರಸಭೆ, ಕುಷ್ಟಗಿ ಹಾಗೂ ಕಾರಟಗಿ ಪುರಸಭೆ, ಕನಕಗಿರಿ, ತಾವರಗೇರಾ, ಯಲಬುರ್ಗಾ, ಕುಕನೂರು, ಭಾಗ್ಯನಗರ ಪಟ್ಟಣ ಪಂಚಾಯತ್‌ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಜಮೀನನ್ನು ಖರೀದಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ಸೌಲಭ್ಯ ನೀಡಬೇಕು. ಈ ನಿಟ್ಟಿನಲ್ಲಿ ಜಮೀನು ಖರೀದಿಗಾಗಿ ಪ್ರಸ್ತಾವನೆಗಳನ್ನು ಮತ್ತು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗಾಗಿ ಅವಶ್ಯವಿದ್ದರೆ ಹೊಸದಾಗಿ ಅರ್ಜಿ ಕರೆದು ಅರ್ಹರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಸಂಬಂಧಿಸಿದ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಬೇಕು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ವಸತಿ ರಹಿತರಿಗೆ ನಿವೇಶನ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಸಿ.ಡಿ. ಗೀತಾ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ, ಜಿಪಂ ಯೋಜನಾ ನಿರ್ದೇಶಕ ರವಿ ಬಿಸರಳ್ಳಿ, ಕೊಪ್ಪಳ ತಹಶೀಲ್ದಾರ್‌ ಜೆ.ಬಿ ಮಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next