Advertisement
ವಿಚಾರಣೆ ವೇಳೆ ಸುಪ್ರೀಂಕೋರ್ಟ್ 2014ರಲ್ಲಿ ಆದೇಶ ಪ್ರಸ್ತಾಪಿಸಿದ ಪೀಠ, ರಾಜ್ಯ ವಿಶೇಷ ಮೀಸಲು ಪೇದೆಗಳ ಪಡೆ ಮತ್ತು ಬ್ಯಾಂಡ್ಸ್ ಮೆನ್ ಹುದ್ದೆಗಳ ನೇಮಕಾತಿಯಲ್ಲಿ ಏಕೆ ಆದೇಶ ಪಾಲಿಸಿಲ್ಲ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಸರ್ಕಾರಕ್ಕೆ ಸೂಚಿಸಿತು. ಅಲ್ಲದೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿತು.
ಬೆಂಗಳೂರು: ಪಕ್ಷಿ ಸಂರಕ್ಷಿತಾ ವಲಯವಾಗಿರುವ ಯಲಹಂಕದ ಪುಟ್ಟೇನಹಳ್ಳಿ ಕೆರೆಯ ಸಂರಕ್ಷಣಾ ಸಮಿತಿಯನ್ನು ಮೂರು ವಾರಗಳಲ್ಲಿ ಪುನರ್ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಯಲಹಂಕದ ಪುಟ್ಟೇನಹಳ್ಳಿ ಕೆರೆಯ ನಿರ್ವಹಣೆಯನ್ನು ಬಿಬಿಎಂಪಿಗೆ ವಹಿಸಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಯಲಹಂಕ ಪುಟ್ಟೇನಹಳ್ಳಿ ಕೆರೆ-ಪಕ್ಷಿ ಸಂರಕ್ಷಣಾ ಟ್ರಸ್ಟ್ ಮತ್ತು ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಸ್. ಓಕ್ ಹಾಗೂ ನ್ಯಾ. ಆರ್. ನಟರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು. ಅರ್ಜಿದಾರರ ಪರ ವಕೀಲರಾದ ಅಶೋಕ್ ಕಲ್ಯಾಣ ಶೆಟ್ಟಿ ವಾದಿಸಿ, ಯಲಹಂಕದ ಪುಟ್ಟೇನಹಳ್ಳಿ ಕೆರೆಯ ಸಂರಕ್ಷಣಾ ಸಮಿತಿ ಈವರೆಗೆ ಒಂದೇ ಸಭೆ ನಡೆಸಿದ್ದೂ, ಅದಕ್ಕೆ ಮುಖ್ಯಸ್ಥರೇ ಬಂದಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ನಿರ್ವಹಣೆ ಸಮಿತಿಯಲ್ಲಿ ಅರಣ್ಯ ಇಲಾಖೆ ಒಬ್ಬ ಪ್ರತಿನಿಧಿ ಇದ್ದು ಮೂರು ವಾರದಲ್ಲಿ ಮರುರಚಿಸಲು ಸರ್ಕಾರಕ್ಕೆ ನಿರ್ದೇಶಿಸಿತು.