Advertisement
3ಎನಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2ಸಿ ವರ್ಗ ಹಾಗೂ 3ಬಿಯಲ್ಲಿದ್ದ ಲಿಂಗಾಯತರಿಗೆ 2ಡಿ ಎಂಬ ಮೀಸಲಾತಿ ವರ್ಗ ರಚಿಸಲು ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
Related Articles
Advertisement
2ಎ ಮೀಸಲಾತಿಗಾಗಿ ಹೋರಾಟ ಮಾಡಿದ್ದ ಪಂಚಮಸಾಲಿ ಸಮುದಾಯದ ಕೂಡಲ ಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಪ್ರತಿಕ್ರಿಯಿಸಿ ,ಮಾನ್ಯ ಸಿಎಂ ಡಿ.29ರಂದು ನಿರ್ಣಯ ಕೈಗೊಳ್ಳುವುದಾಗಿ ಹೇಳಿದ್ದರು.ಮಾಧುಸ್ವಾಮಿ ಹೇಳಿಕೆ ಬಗ್ಗೆ ಸ್ಪಷ್ಟ ನಿಖರ ಮಾಹಿತಿ ಸಿಕ್ಕಿಲ್ಲ. ಈರಣ್ಣ ಕಡಾಡಿ, ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ಮಾತನಾಡಿದ್ದೇನೆ. ಅವರು ಬರ್ತಾರೆ ಅವರು ಬಂದ ಮೇಲೆ ಚರ್ಚಿಸಿ ನಿರ್ಧಾರ ತಿಳಿಸುತ್ತೇನೆ. ಸ್ಪಷ್ಟ ಮಾಹಿತಿ ಗೊತ್ತಿಲ್ಲ, ಕ್ಯಾಬಿನೆಟ್ ಪ್ರತಿ ನಮಗೆ ಸಿಕ್ಕಿಲ್ಲ.ಸ್ಪಷ್ಟವಾದ ಮಾಹಿತಿ ಜನರಿಗೆ ತಿಳಿಸುತ್ತೇವೆ. ಈಗಲೇ ವಿಜಯೋತ್ಸವ, ತಿರಸ್ಕಾರ ಯಾವುದೇ ತೀರ್ಮಾನ ಕೈಗೊಳ್ಳಬೇಡಿ. ಎಲ್ಲ ವಿಚಾರ ತಿಳಿದುಕೊಂಡು ಮಾಹಿತಿ ನೀಡುತ್ತೇನೆ ಎಂದರು.
ಪಂಚಮಸಾಲಿ ಸಮಾಜದ ಕಾರ್ಯಕಾರಣಿ ಸಭೆ ಹಿನ್ನೆಲೆಯಲ್ಲಿ ಮುಖಂಡರು, ಪದಾಧಿಕಾರಿಗಳು ಕೂಡ ಆಗಮಿಸಿದ್ದರು.
ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ಚನ್ನಮ್ಮ ವೃತ್ತದಲ್ಲಿ ಪೋಲಿಸ್ ಭದ್ರತೆ ಕೈಗೊಳ್ಳಲಾಗಿದ್ದು, ಕೆಎಸ್ಆರ್ ಪಿ ಹಾಗೂ ಸಿಎಆರ್,ಪೋಲಿಸ್ ಸಿಬಂದಿಗಳನ್ನು ನಿಯೋಜಿಸಲಾಗಿದೆ.