Advertisement
ಸಭೆ ಪ್ರಾಂಭವಾಗುತ್ತಿದಂತೆಯೇ ತಾಪಂ ಇಒ ಮಾತನಾಡಿ, ತಾಲೂಕಿನಲ್ಲಿ ಸುಮಾರು 77.35ಎಕರೆ ಸರ್ಕಾರಿ ಜಮೀನನ್ನು ಗುರುತಿಸಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶೀಘ್ರವಾಗಿ ನಿವೇಶನ ಇಲ್ಲದವರಿಗೆ ನಿವೇಶನ ನೀಡಲು ಕ್ರಮವಹಿಸಿಲಾಗಿದೆ. 2011ರ ಜನಗಣತಿಯ ಪ್ರಕಾರ ನಿವೇಶ ಹಂಚಲು ಕ್ರಮಕೈಗೊಳ್ಳಲಾಗಿದೆ. ಈ ಸಂಬಂಧ ಈಗಾಗಲೇ ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ನಡೆಸಿ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಜತೆಗೆ ಈಗ ಹೊಸದಾಗಿ ಯಾವುದೇ ನಿವೇಶನ ವಿತರಣೆ ಮಾಡಲು ಅವಕಾಶವಿಲ್ಲ ಎಂದರು.
Related Articles
Advertisement
ಭವನಗಳ ನಿರ್ಮಾಣ: ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಡಾ.ಅಂಬೇಡ್ಕರ್ ಭವನಗಳನ್ನು ನಿರ್ಮಾಣ ಮಾಡಲು ಕೆಆರ್‌ಐಡಿಎಲ್ ಅವರಿಗೆ ನೀಡಲಾಗಿತ್ತು. ಆದರೆ ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆಲವು ಭವನಗಳು ಅರ್ದಕ್ಕೆ ನಿಂತುಹೋಗಿವೆ ಎಂದು ಸದಸ್ಯ ಅಲ್ಪಹಳ್ಳಿ ಗೋವಿಂದಯ್ಯ ಇಒ ಅವರನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಇಒ ಆರ್. ಪಿ.ಮಹೇಶ್ ಅವರು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಪಡೆಯಲಾಗುವುದು ಎಂದರು.
ಭತ್ತ ಖರೀದಿ ಕೇಂದ್ರ ಸ್ಥಾಪನೆ: ಭತ್ತ ಹಾಗೂ ರಾಗಿ ಖರೀದಿ ಕೇಂದ್ರಗಳನ್ನು ಪಟ್ಟದ ಎಪೆಂಸಿ ಆವರಣ ಹಾಗೂ ಕ್ಯಾತನಹಳ್ಳಿ ಗ್ರಾಪಂ, ರೈತ ಸಂಪರ್ಕ ಕೇಂದ್ರಗಳಾದ ಚಿನಕುರಳಿ, ಜಕ್ಕನಹಳ್ಳಿಯಲ್ಲಿ ತೆರೆಯಲಾಗಿದೆ. ಪ್ರತಿ ಕ್ವಿಂಟಕ್ ಭತ್ತಕ್ಕೆ 1,815 ರೂ. ಹಾಗೂ ರಾಗಿ ಕ್ವಿಂಟಲ್‌ಗೆ 3150 ರೂ. ನಿಗದಿ ಪಡಿಸಲಾಗಿದೆ. ಹಾಗಾಗಿ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ ಇಲಾಖೆ ಶಿರಸ್ತೇದಾರ್ ನಟರಾಜು ಸಭೆಗೆ ತಿಳಿಸಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಮಾತನಾಡಿ, ತಾಲೂಕಿನಲ್ಲಿ ಕೆಲವೊಂದು ಖಾಸಗಿ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪ್ರತಿ ಖಾಸಗಿ ಸಗಟು ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಅಂತಹ ಯಾವುದೇ ವಿಚಾರ ಕಂಡುಬಂದಿಲ್ಲ ಎಂದರು.
ಉಪಾಧ್ಯಕ್ಷೆ ಲಕ್ಷ್ಮಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಪುಟ್ಟೇಗೌಡ ಸೇರಿದಂತೆ ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.