Advertisement
ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರಕಾರವು ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೇರಿಸಿ ಬಳಿಕ ಶೇ. 6 ಎಡಗೈ, ಶೇ. 5.5 ಬಲಗೈ, ಶೇ 4.5ರಷ್ಟು ಬಂಜಾರ, ಭೋವಿ, ಕೊರಚ ಮತ್ತು ಕೊರಮ ಹಾಗೂ ಶೇ. 1 ಮೀಸಲಾತಿಯನ್ನು ಇತರ ಪರಿಶಿಷ್ಟರಿಗೆ ನೀಡಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿತ್ತು. ಆ ಬಳಿಕ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರಕಾರವು ಕೇಂದ್ರ ಸರಕಾರಕ್ಕೆ ಪತ್ರ ಬರೆದು ಒಳಮೀಸಲಾತಿಗೆ ಅವಕಾಶ ಕಲ್ಪಿಸುವಂತೆ ಸಂವಿಧಾನದ 341ನೇ ವಿಧಿಗೆ ತಿದ್ದುಪಡಿ ಮಾಡುವಂತೆ ಪತ್ರ ಬರೆದಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ್ದು, ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದು ದಾಗಿದೆ. ನ್ಯಾಯಾಲಯದ ಈ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದಿದ್ದಾರೆ.
ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶವೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Related Articles
ಇನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಮ್ಮ ಸರಕಾರ ಆಂತರಿಕ ಮೀಸಲಾತಿಯನ್ನು ಸಂಪುಟದಲ್ಲಿ ಒಪ್ಪಿ, ಸರಕಾರಿ ಆದೇಶವನ್ನು ಮಾಡಿ, ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿರುವ ನಿಲುವನ್ನು ಇಂದು ಏಳು ನ್ಯಾಯಾಧೀಶರನ್ನೊಳಗೊಂಡ ಸರ್ವೋಚ್ಚ ನ್ಯಾಯಾಲಯದ ಸಂವಿಧಾನಿಕ ಪೀಠ ಎತ್ತಿ ಹಿಡಿದಿರುವುದು ಐತಿಹಾಸಿಕ ತೀರ್ಪು ಮತ್ತು ಎಸ್ಸಿ ಜನಾಂಗದ ಒಳ ಮೀಸಲಾತಿ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
Advertisement
ಒಳ ಮೀಸಲಾತಿ ಕಲ್ಪಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ನೀಡಿದೆ. ನಮ್ಮಲ್ಲಿ ನ್ಯಾ| ಸದಾಶಿವ ಆಯೋಗದ ವರದಿಯ ಆಧಾರದಲ್ಲಿ ಒಳಮೀಸಲಾತಿ ನೀಡುವುದನ್ನು ನಾವು ವಿರೋಧಿಸುತ್ತೇವೆ. ಆ ವರದಿ ವೈಜ್ಞಾನಿಕವಾಗಿದೆ.ಹೊಸದಾಗಿ ವೈಜ್ಞಾನಿಕವಾಗಿ ಗಣತಿ ನಡೆಸಬೇಕು.
*ಪ್ರಕಾಶ್ ರಾಥೋಡ್, ವಿಧಾನ ಪರಿಷತ್ ಸದಸ್ಯ ನಮ್ಮ 3 ದಶಕಗಳ ಹೋರಾಟಕ್ಕೆ ಸುಪ್ರೀಂಕೋರ್ಟ್ ನಲ್ಲಿ ಜಯ ಸಿಕ್ಕಿದೆ. ಈಗಾಗಲೇ ಮೀಸಲು ಪ್ರಯೋಜನ ಪಡೆದು ಕೆನೆಪದರ ತಲುಪಿದವರಿಗೆ ಮೀಸಲಾತಿ ಅವಶ್ಯಕತೆ ಇಲ್ಲ ಎಂದು ಹೇಳಿರುವುದು ದಲಿತ ಸಮುದಾಯಗಳಲ್ಲಿರುವ ಧ್ವನಿ ಇಲ್ಲದ ವರ್ಗಕ್ಕೆ ಆಶಾಕಿರಣವಾಗಿದೆ.
*ಡಾ| ಚಿ.ನಾ. ರಾಮು, ರಾಷ್ಟ್ರೀಯ ಅಧ್ಯಕ್ಷ, ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಒಳಮೀಸಲಾತಿ ಎತ್ತಿಹಿಡಿದಿರುವ ಸುಪ್ರೀಂಕೋರ್ಟ್ ತೀರ್ಪು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಅಭೂತಪೂರ್ವ ಗೆಲುವು. ಇದು ಸಾಮಾಜಿಕ ನ್ಯಾಯಕ್ಕೆ ನವ ಶಕ್ತಿ ಹಾಗೂ ಭಾರತೀಯ ಸಂವಿಧಾನದ ಆಶಯಕ್ಕೆ ಇನ್ನಷ್ಟು ಬಲ ನೀಡಿದಂತಾಗಿದೆ. ಮೂರು ದಶಕಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ.
*ಗೋವಿಂದ ಕಾರಜೋಳ, ಚಿತ್ರದುರ್ಗ ಸಂಸದ