Advertisement

ಉ.ಪ್ರ.ದಲ್ಲೂ ಮೀಸಲಾತಿ ಜಾರಿ

12:30 AM Jan 19, 2019 | Team Udayavani |

ಲಕ್ನೋ: ಕೇಂದ್ರ ಸರಕಾರ ಇತ್ತೀಚೆಗಷ್ಟೇ ಘೋಷಿಸಿದ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ಮೀಸಲಾತಿ ನೀಡುವ ಯೋಜನೆಯನ್ನು ಉತ್ತರ ಪ್ರದೇಶವೂ ಜಾರಿಗೊಳಿಸಲು ಸಮ್ಮತಿಸಿದೆ. ಸಿಎಂ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮತಿ ನೀಡಲಾಗಿದೆ. ಈಗಾಗಲೇ ಗುಜರಾತ್‌ ಮತ್ತು ಜಾರ್ಖಂಡ್‌ ರಾಜ್ಯಗಳಲ್ಲಿ ಈ ಮೀಸಲಾತಿಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕ ಬಳಿಕದಲ್ಲಿ ಈ ಮಸೂದೆ ಆಯಾ ರಾಜ್ಯದ ವಿಧಾನ ಸಭೆಗಳಲ್ಲಿ ಅನುಮೋದನೆ ಪಡೆಯಬೇಕಿದೆ. ನಂತರ ಇದು ಜಾರಿಗೆ ಬರಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next