Advertisement

ವಿವಿಯಲ್ಲಿ ಮೀಸಲಾತಿ: ಅಧ್ಯಾದೇಶಕ್ಕೆ ನಿರ್ಧಾರ?

12:30 AM Feb 12, 2019 | Team Udayavani |

ಹೊಸದಿಲ್ಲಿ: ವಿಶ್ವವಿದ್ಯಾಲಯಗಳ ಸಿಬಂದಿ ನೇಮಕಾತಿಯಲ್ಲಿ ಮೀಸಲಾತಿ ವಿಧಾನದ ಬಗ್ಗೆ ಕೇಂದ್ರ ಸರಕಾರದ ಮರುಪರಿಶೀಲನೆ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದರೆ, ಇದಕ್ಕೆ ಸಂಬಂಧಿಸಿದಂತೆ ಅಧ್ಯದೇಶವನ್ನು ಹೊರತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರದ ಅವಧಿಯಲ್ಲಿ ಉತ್ತರಿಸಿದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಈ ಬಗ್ಗೆ ವಿವರಿಸಿದ್ದಾರೆ. ಈಗಾಗಲೇ ವಿಶೇಷ ವಿನಾಯಿತಿ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿದ್ದು, ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಲಾಗುತ್ತದೆ ಎಂದಿದ್ದಾರೆ. ವಿವಿಧ ಸಮುದಾಯಗಳಿಗೆ ಮೀಸಲು ಆಧಾರದಲ್ಲಿ ಹುದ್ದೆ ಭರ್ತಿ ಮಾಡಲು ಒಂದು ವಿಭಾಗವನ್ನು ಘಟಕ ಎಂದು ಪರಿಗಣಿಸಬೇಕು ಎಂದು ಈ ಹಿಂದೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ ನಿರ್ಧರಿಸಿತ್ತು. ಇದನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next