Advertisement

ಮೀಸಲಾತಿ ಮಿತಿ ಶೇ. 70ರಷ್ಟು ವಿಸ್ತರಿಸಲು ಬದ್ಧ

08:10 AM Oct 06, 2017 | Team Udayavani |

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಕ್ಕಿಲ್ಲ. ಹಾಗಾಗಿ ರಾಜ್ಯದಲ್ಲಿ ಮೀಸಲಾತಿ ಪ್ರಮಾಣವನ್ನು ಶೇ. 70ರಷ್ಟು ಹೆಚ್ಚಳ ಮಾಡಲು ವಿಧಾನಮಂಡಲದಲ್ಲಿ ನಿರ್ಣಯ ಕೈಗೊಂಡು ಸಂವಿಧಾನ ತಿದ್ದುಪಡಿಗೆ ಶಿಫಾರಸು ಮಾಡಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

Advertisement

ಶಾಸಕರ ಭವನದ ಮುಂಭಾಗ ನೂತನವಾಗಿ ಪ್ರತಿಷ್ಠಾಪಿಸಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ಗುರುವಾರ ಅನಾವರಣಗೊಳಿಸಿ, ತಪೋವನ ಉದ್ಘಾಟಿಸಿದ ಅನಂತರ ವಿಧಾನಸೌಧದ ಪೂರ್ವ ದ್ವಾರದಲ್ಲಿ ನಡೆದ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ ಮೀಸಲಾತಿ ಮಿತಿಯನ್ನು ಶೇ. 50ಕ್ಕೆ ಸೀಮಿತಗೊಳಿಸಿದೆ. ಈಗಾಗಲೇ ಸಾಮಾಜಿಕ ಮತ್ತು ಆರ್ಥಿಕ ಗಣತಿಗೆ ಆದೇಶಿಸಿದ್ದು, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೆಲವೇ ದಿನಗಳಲ್ಲಿ ವರದಿ ನೀಡಿದರೆ ವಿ.ಎಸ್‌. ಉಗ್ರಪ್ಪ ಸಹಿತ ಇತರ ಪ್ರಮುಖರೊಂದಿಗೆ ಚರ್ಚಿಸಿ ಮೀಸಲಾತಿ ಪ್ರಮಾಣ ವಿಸ್ತರಣೆ ಪ್ರಯತ್ನ ಆರಂಭಿಸಲಾಗುವುದು ಎಂದು ಹೇಳಿದರು.

ವಾಲ್ಮೀಕಿ ಜಯಂತಿಯನ್ನು ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಆಚರಿಸಲಾಗುತ್ತಿತ್ತು. ಈ ವರ್ಷ ವಿಶೇಷವಾಗಿ ವಿಧಾನಸೌಧದ ಆವರಣದಲ್ಲಿ ಜಯಂತ್ಯುತ್ಸವ ನಡೆಸಲಾಗುತ್ತಿದೆ. ಇಡೀ ಜಗತ್ತಿಗೆ, ಮನುಕುಲದ ಬದುಕಿಗೆ ಮಾರ್ಗದರ್ಶನ ನೀಡಿದ ಆದಿಕವಿ ಮಹರ್ಷಿ ವಾಲ್ಮೀಕಿ ವಿಚಾರ, ಸಂದೇಶವನ್ನು ಪ್ರತಿ ಮನೆ ಮನೆಗೆ ತಲುಪಿಸಲು, ಪ್ರತಿಯೊಬ್ಬರಿಗೂ ಸ್ಫೂರ್ತಿ ಸಿಗಲೆಂದು ಶಾಸಕರ ಭವನದ ಮುಂಭಾಗ 2.5 ಎಕ್ರೆ ಜಾಗದಲ್ಲಿ ತಪೋವನ ನಿರ್ಮಿಸಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ ಎಂದು ತಿಳಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next