Advertisement
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರೂ ಪೂರ್ವನಿಗದಿಯಂತೆ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಸಂಬಂಧ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಸಮುದಾಯದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಭೆಯಲ್ಲಿ ಮಾತನಾಡಿ ಪ್ರವರ್ಗ 2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
1. ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದರು. 2. ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.
Related Articles
Advertisement
4. ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ಸಂಬಂಧ ವರದಿ ಸಲ್ಲಿಸಲು ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ, ಮಧ್ಯಂತರ ವರದಿ ಸಲ್ಲಿಸಿದ್ದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಧ್ಯಂತರ ವರದಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿತು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶಾಸಕರಾದ ವಿನಯ್ ಕುಲಕರ್ಣಿ, ವಿಜಯ್ ಕಾಶಪ್ಪನವರ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40 ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.