ಬೀದರ್: ದೇಶದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಇತರೆ ಹಿಂದುಳಿದ ವರ್ಗಕ್ಕೆ ಸದ್ಯ ಶೇ. 50ರಷ್ಟು ಮೀಸಲಾತಿ ಸೌಲಭ್ಯವಿದೆ. ಇದರಲ್ಲಿ ಬದಲಾವಣೆ ಮಾಡದೆ ಹೆಚ್ಚುವರಿಯಾಗಿ ಶೇ.25ರಷ್ಟು ಮೀಸಲಾತಿ ಒದಗಿಸಬೇಕು.
ಇದರಿಂದ ಲಿಂಗಾಯತರು, ಮರಾಠರು ಮುಂತಾದ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಬಹುದೆಂದು
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ರಾಮದಾಸ ಆಠವಲೆ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿದ್ದು, ಈ ಕುರಿತು ಪ್ರಧಾನಿ ಹಾಗೂ ಎನ್‌ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಿದ್ದೇನೆಂದು ತಿಳಿಸಿದರು.
ರಕ್ಷಣೆ ಹೆಸರಲ್ಲಿ ಗೂಂಡಾಗಿರಿ: ಗೋವುಗಳ ರಕ್ಷಣೆ ಹೆಸರಿನಲ್ಲಿ ಗೂಂಡಾಗಿರಿ ಮಾಡಿ ದಲಿತರು, ಮುಸ್ಲಿಮರ ಹತ್ಯೆ ನಡೆದಿವೆ. ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ಕೃತ್ಯ ನಡೆದಿದೆ. ಅಂಥವರ ವಿರುದಟಛಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.