Advertisement

‌Mohan Bhagwat: ಸಮಾಜದಲ್ಲಿ ಅಸಮಾನತೆ ಇರೋವವರೆಗೂ ಮೀಸಲಾತಿ ಮುಂದುವರಿಯಬೇಕು: ಭಾಗವತ್

10:22 AM Sep 07, 2023 | Team Udayavani |

ನವದೆಹಲಿ: ನಮ್ಮ ಸಮಾಜದಲ್ಲಿ ತಾರತಮ್ಯ ಹೋಗಿಲ್ಲ ಮತ್ತು ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ ಎಸ್‌ ಎಸ್)‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Advertisement

ಇದನ್ನೂ ಓದಿ:Measles: ಕರಾವಳಿಯಲ್ಲಿ ಉಲ್ಬಣಿಸಿದ ದಡಾರ… ಕಳೆದ ವರ್ಷದಿಂದ ಈ ಬಾರಿ ಏರಿಕೆ!

ಬುಧವಾರ (ಸೆಪ್ಟೆಂಬರ್‌ 6) ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 1947ರಲ್ಲಿ ಭಾರತದಿಂದ ಪ್ರತ್ಯೇಕಗೊಂಡವರು ಈಗ ತಾವು ತಪ್ಪು ಮಾಡಿದ್ದೇವೆ ಎಂದು ಭಾವಿಸುತ್ತಿರುವಂತೆ, ಇಂದಿನ ಯುವಪೀಳಿಗೆ ವಯಸ್ಕರಾಗುವ ಮೊದಲು ಅಖಂಡ ಭಾರತ ಅಥವಾ ಅವಿಭಜಿತ ಭಾರತದ ಕನಸು ನನಸಾಗಲಿದೆ ಎಂದರು.

ಮಹಾರಾಷ್ಟ್ರದಲ್ಲಿ ಮೀಸಲಾತಿಗಾಗಿ ಮರಾಠ ಸಮುದಾಯದ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮೀಸಲಾತಿ ಕುರಿತು ಮೋಹನ್‌ ಭಾಗವತ್‌ ಈ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮವರನ್ನೇ ನಾವು ಕತ್ತಲೆಯಲ್ಲಿ ಇರಿಸಿದ್ದೇವೆ. ನಾವು ಅವರ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲ. ಇದರ ಪರಿಣಾಮ ಇದು 2000 ವರ್ಷಗಳವರೆಗೂ ಮುಂದುವರೆಯಿತು. ನಾವು ಅವರಿಗೆ ಸಮಾನತೆಯನ್ನು ನೀಡುವವರೆಗೆ, ಕೆಲವು ವಿಶೇಷ ಪರಿಹಾರಗಳನ್ನು ಒದಗಿಸಬೇಕಾಗುತ್ತದೆ. ಇದರಲ್ಲಿ ಮೀಸಲಾತಿಯೂ ಕೂಡಾ ಒಂದು. ಹಾಗಾಗಿ ಸಮಾಜದಲ್ಲಿ ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು. ನಾವು ಸಂವಿಧಾನದಲ್ಲಿ ಒದಗಿಸಿರುವ ಮೀಸಲಾತಿಗೆ ಎಲ್ಲಾ ರೀತಿಯ ಬೆಂಬಲ ನೀಡುತ್ತೇವೆ ಎಂದು ಭಾಗವತ್‌ ಹೇಳಿದರು.

Advertisement

ಮೀಸಲಾತಿ ಎಂದರೆ ಗೌರವವನ್ನು ನೀಡುವುದಾಗಿದೆ. ಇದು ಆರ್ಥಿಕ ಅಥವಾ ರಾಜಕೀಯ ಸಮಾನತೆಯನ್ನು ಖಚಿತಪಡಿಸುವ ವಿಷಯವಲ್ಲ ಎಂದು ಭಾಗವತ್‌ ತಿಳಿಸಿದ್ದಾರೆ. ಅಸಮಾನತೆಯನ್ನು ಎದುರಿಸುತ್ತಿರುವ ಸಮುದಾಯಗಳು 2000 ವರ್ಷಗಳಿಂದ ನೋವು ಅನುಭವಿಸುತ್ತಿದ್ದರೆ, ನಾವು (ತಾರತಮ್ಯ ಎದುರಿಸದಿರುವವರು) ಇನ್ನೂ 200 ವರ್ಷಗಳವರೆಗೆ ನಾವು ಏಕೆ ಕೆಲವು ಸಮಸ್ಯೆಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಭಾಗವತ್‌ ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next